ಸೊರಬ, ಹೊಸನಗರದ ವಿವಿಧ ಕಾರ್ಯಕ್ರಮಗಳಲ್ಲಿ ನಾಳೆ ಸಚಿವ ಮಧು ಬಂಗಾರಪ್ಪ ಭಾಗಿ

 ಶಿವಮೊಗ್ಗ  LIVE 

ಶಿವಮೊಗ್ಗ: ಸಚಿವ (Minister) ಮಧು ಬಂಗಾರಪ್ಪ ಅವರು ಡಿಸೆಂಬರ್‌ 26ರಂದು ಸೊರಬ ಮತ್ತು ಹೊಸನಗರ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್‌, ಎಲ್ಲೆಲ್ಲಿ ಹೇಗಿತ್ತು ಆಚರಣೆ?

ಬೆಳಗ್ಗೆ 8.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.45ಕ್ಕೆ ಸೊರಬ – ಎಡ್ರಬೈಲು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11ಕ್ಕೆ ಹೊಸನಗರದ ಈಡಿಗರ ಸಮುದಾಯ ಭವನದ ಉದ್ಘಾಟನೆ, ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಪಿಸಿ ವತಿಯಿಂದ ನಗರ ಸಮೀಪದ ಚಿಕ್ಕಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಿರುವ ನೂತನ ಕೊಠಡಿಗಳ ಉದ್ಘಾಟನೆ, ಶಾಲೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment