ಉದ್ಯೋಗ ಖಾತ್ರಿ ಯೋಜನೆ ಅಡಿ ಇಬ್ಬರು ಸಚಿವರಿಂದ ಶ್ರಮದಾನಕ್ಕೆ ದಿನಾಂಕ ಫಿಕ್ಸ್‌, ಎಲ್ಲಿ?

ಸೊರಬ : ಉದ್ಯೋಗ ಖಾತ್ರಿ ಯೋಜನೆ ಅಡಿ ಶಾಲೆಯ ಕಾಂಪೌಂಡ್‌ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಏ.7ರಂದು ಬೆಳಗ್ಗೆ 8ಕ್ಕೆ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (School) ಕಾರ್ಯಕ್ರಮ ನಡೆಯಲಿದೆ. ಅಂದು ಇಬ್ಬರು ಸಚಿವರು ಶ್ರಮದಾನ ಮಾಡಲಿದ್ದಾರೆ. (ಈ ಸುದ್ದಿಯನ್ನು ಇನ್ನು 42 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಶಾಲೆಯ ಕಾಂಪೌಂಡ್‌ ನಿರ್ಮಾಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಗೆ ಶ್ರಮದಾನ ಮಾಡಲಿದ್ದಾರೆ. ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಕೂಡ ಶ್ರಮದಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Madhu-Bangarappa-Shramadana-in-Soraba

ಈ ಹಿಂದೆ ಶಾಸಕರಾಗಿದ್ದಾಗ ಮಧು ಬಂಗಾರಪ್ಪ ಶ್ರಮದಾನ ಮಾಡಿದ್ದರು. ಈಗ ಪುನಃ ಕ್ಷೇತ್ರ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಶ್ರಮದಾನಕ್ಕೆ ಮುಂದಾಗಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?

Madhu-Bangarappa-Shramadana-in-Soraba

Leave a Comment