ಸೊರಬ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ (Mishap) ಹೊಡೆದಿದೆ. ಘಟನೆಯಲ್ಲಿ 75 ವರ್ಷದ ವೃದ್ಧೆ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ತಾಲೂಕು ತಲ್ಲೂರಿನಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಪೂರಾಭಿ (75), ದಾದಾಪೀರ್ ಮತ್ತು ಅವರ ಪುತ್ರ ಸಲ್ಮಾನ್ ಗಾಯಗೊಂಡಿದ್ದಾರೆ. ಅಸ್ವಸ್ಥಗೊಂಡಿದ್ದ ಸಪೂರಾಭಿ ಅವರನ್ನು ಬೈಕಿನಲ್ಲಿ ಆನವಟ್ಟಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮನೆಗೆ ಮರಳುತ್ತಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?
ದಾದಾಪೀರ್ ಅವರು ಬೈಕ್ ಚಲಾಯಿಸುತ್ತಿದ್ದರು. ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು, ಬೈಕ್‌ಗೆ ಡಿಕ್ಕಿ ಹೊಡದು, ಸ್ವಲ್ಪ ದೂರ ಚಲಿಸಿ, ರಸ್ತೆ ಅಂಚಿಗೆ ಡಿಕ್ಕಿಯಾಗಿ ನಿಂತಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






