ಚಂದ್ರಗುತ್ತಿಯಲ್ಲಿ ನೂಲು ಹುಣ್ಣಿಮೆ, ಶ್ರದ್ಧಾ ಭಕ್ತಿಯಿಂದ ನೆರವೇರಿದ ಪೂಜೆ, ಹೇಗಿತ್ತು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸೊರಬ: ಪ್ರಸಿದ್ಧ ಪುಣ್ಯಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನೂಲು ಹುಣ್ಣಿಮೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು.

ಶಿವಮೊಗ್ಗ ಸೇರಿದಂತೆ ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಹರಿಹರ, ರಾಣೆಬೆನ್ನೂರು, ಹಿರೇಕೆರೂರು, ಬ್ಯಾಡಗಿ, ಕಿತ್ತೂರು ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಶ್ರಾವಣ ಮಾಸದಲ್ಲಿ ರೇಣುಕಾಂಬಾ ದೇವಿಯ ದರ್ಶನ ಪಡೆಯುವುದು ಶ್ರೇಯಸ್ಕರ ಎಂಬ ನಂಬಿಕೆಯಿಂದ ಭಕ್ತರು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾದು ದರ್ಶನ ಪಡೆದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ. (ಫೋಟೊ ಕೃಪೆ: ಗುತ್ತಿ ಸಿರಿ ಅಫೀಷಿಯಲ್)

ದೇವಸ್ಥಾನದ ಆವರಣದಲ್ಲಿ ಪೂಜಾ ಸಾಮಗ್ರಿ, ಬಳೆ, ಕಂಕಣ, ಆಟಿಕೆ ಹಾಗೂ ಉಪಹಾರ ಮಳಿಗೆಗಳಲ್ಲಿ ವ್ಯಾಪಾರ ಜೋರಿತ್ತು. ಭಕ್ತರ ಅನುಕೂಲಕ್ಕಾಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸೊರಬ ತಾಲ್ಲೂಕಿನ ನಲ್ಲಿಕೊಪ್ಪ ಗ್ರಾಮದ ಸೊಟ್ಟಣ್ಣನವರ್ ಕುಟುಂಬದವರು ಭಕ್ತರಿಗೆ ಅನ್ನದಾಸೋಹ ಸೇವೆ ನಡೆಸಿದರು. ಕಳೆದ ಮೂರು ವರ್ಷಗಳಿಂದ ಈ ಸೇವೆ ಸಲ್ಲಿಸುತ್ತಿರುವ ಕುಟುಂಬದವರು ಈ ವರ್ಷವೂ ಶ್ರದ್ಧೆಯಿಂದ ಅನ್ನದಾಸೋಹ ಏರ್ಪಡಿಸಿದ್ದರು.

Nulu-Hunnime-at-Chandragutti-temple-in-Soraba