ಚಂದ್ರಗುತ್ತಿ ರೇಣುಕಾಂಬ ದೇಗುಲದಲ್ಲಿ ನೂಲು ಹುಣ್ಣಿಮೆ, ಲಕ್ಷ ಲಕ್ಷ ಭಕ್ತರು ಭಾಗಿ, ಹೇಗಿತ್ತು ಪೂಜಾ ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 SEPTEMBER 2023

SORABA : ಶ್ರಾವಣ ಮಾಸದ ನೂಲು ಹುಣ್ಣಿಮೆ (Nulu Hunnime) ನಿಮಿತ್ತ ಗುರುವಾರ ಲಕ್ಷಾಂತರ ಭಕ್ತರು ಪುರಾಣ ಪ್ರಸಿದ್ಧ ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬೆ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಹೊರ ಜಿಲ್ಲೆಗಳಿಂದಲು ಭಕ್ತರ ದಂಡು

ಸೊರಬ, ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಸಿದ್ದಾಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಕೂಗಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ – ಗಂಭೀರ ಸ್ಥಿತಿಗೆ ತಲುಪಿದ್ದ ಶಿವಮೊಗ್ಗದ ಸ್ನೇಕ್‌ ಕಿರಣ್‌ ಈಗ ಹೇಗಿದ್ದಾರೆ? ಆ ದಿನ ಹಾವು ಕಚ್ಚಿದ್ದು ಹೇಗೆ?

ಪರಿವಾರ ದೇವರಿಗೆ ಪೂಜೆ

ಪರಿವಾರ ದೇವರಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ರಥಬೀದಿಯಲ್ಲಿ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟು ಜೋರಾಗಿ ನಡೆಯಿತು.

ಕೆಲ ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯ ಕಂಡು ಬಂತು. ಪೊಲೀಸ್‌ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2023

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment