ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SORABA : ಶ್ರಾವಣ ಮಾಸದ ನೂಲು ಹುಣ್ಣಿಮೆ (Nulu Hunnime) ನಿಮಿತ್ತ ಗುರುವಾರ ಲಕ್ಷಾಂತರ ಭಕ್ತರು ಪುರಾಣ ಪ್ರಸಿದ್ಧ ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬೆ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಹೊರ ಜಿಲ್ಲೆಗಳಿಂದಲು ಭಕ್ತರ ದಂಡು
ಸೊರಬ, ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಸಿದ್ದಾಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಕೂಗಿ ಭಕ್ತಿ ಸಮರ್ಪಿಸಿದರು.
ಇದನ್ನೂ ಓದಿ – ಗಂಭೀರ ಸ್ಥಿತಿಗೆ ತಲುಪಿದ್ದ ಶಿವಮೊಗ್ಗದ ಸ್ನೇಕ್ ಕಿರಣ್ ಈಗ ಹೇಗಿದ್ದಾರೆ? ಆ ದಿನ ಹಾವು ಕಚ್ಚಿದ್ದು ಹೇಗೆ?
ಪರಿವಾರ ದೇವರಿಗೆ ಪೂಜೆ
ಪರಿವಾರ ದೇವರಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ರಥಬೀದಿಯಲ್ಲಿ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟು ಜೋರಾಗಿ ನಡೆಯಿತು.
ಕೆಲ ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯ ಕಂಡು ಬಂತು. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.