ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 24 DECEMBER 2024
ಶಿವಮೊಗ್ಗ : ಈ ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಇಂಡುವಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಈಶ್ವರಪ್ಪ ರೆಡ್ ಹ್ಯಾಂಡ್ (Red Hand) ಆಗಿ ಸಿಕ್ಕಿಬಿದ್ದಿದ್ದಾರೆ.
ಇಂಡುವಳ್ಳಿ ಗ್ರಾಮದ ಮೊಹಮ್ಮದ್ ಗೌಸ್ ಅವರ ತಂದೆ ಭಾಷಾ ಸಾಬ್ ಅವರ ಹೆಸರಿನಲ್ಲಿ ಜಮೀನಿನ ಈ ಸ್ವತ್ತು ಮಾಡಿಕೊಡಲು ಪಿಡಿಒ ಈಶ್ವರಪ್ಪ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮೊಹಮ್ಮದ್ ಗೌಸ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇವತ್ತು ಪಿಡಿಒ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪಿಡಿಒ ಈಶ್ವರಪ್ಪನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್‌ಪೆಕ್ಟರ್ ಹೆಚ್.ಎಸ್.ಸುರೇಶ್, ಸಿಬ್ಬಂದಿ ಯೋಗೇಶ್, ಮಂಜುನಾಥ್, ಸುರೇಂದ್ರ, ಪ್ರಕಾಶ್ ಕುಮಾರ್, ಚೆನ್ನೇಶ್, ದೇವರಾಜ್, ಅರುಣ್ ಕುಮಾರ್, ಅಂಜಲಿ, ಜಯಂತ್, ಪ್ರದೀಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್ ವಿಡಿಯೋ ರಿಲೀಸ್, ನೋಡಲು ಇಲ್ಲಿ ಕ್ಲಿಕ್ ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422