ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SORABA : ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ (Missing). ಆತನಿಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೊರಬ ತಾಲೂಕು ಯಡಗೊಪ್ಪ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಉದ್ರಿ ಗ್ರಾಮದ ಯಲ್ಲಪ್ಪ (50) ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿತ್ತು. ಇದರಿಂದ ನೀರು ರಭಸವಾಗಿ ಹರಿಯುತ್ತಿತ್ತು. ಮೀನು ಹಿಡಿಯಲು ಬಲೆ ಹಾಕಿದ್ದ ಯಲ್ಲಪ್ಪ ಅವರು ಕೆರೆಗೆ ಇಳಿದಿದ್ದರು. ಈ ಸಂದರ್ಭ ನಾಪತ್ತೆಯಾಗಿದ್ದಾರೆ.
ಯಲ್ಲಪ್ಪ ಅವರ ಸಹೋದರ, ಮಕ್ಕಳು ಕೆರೆ ಬಳಿ ಇದ್ದರು ಎನ್ನಲಾಗಿದೆ. ಆದರೆ ನೀರಿನ ರಭಸಕ್ಕೆ ಯಲ್ಲಪ್ಪ ಅವರ ರಕ್ಷಣೆ ಸಾಧ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜೋರು ಮಳೆಯಿಂದಾಗಿ ಜಿಲ್ಲೆಯಲ್ಲಿ ಹಳ್ಳ – ಕೊಳ್ಳಗಳು, ಕೆರೆ, ಹೊಳೆಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಸಂದರ್ಭ ಹತ್ಮೀನು ಮತ್ತು ಮೀನು ಹಿಡಿಯಲು ಜನ ಕೆರೆ, ನದಿಗಳಿಗೆ ಇಳಿಯುತ್ತಿದ್ದಾರೆ. ಇದರಿಂದ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆ ಕೆರೆ, ನದಿಗಳಿಗೆ ಇಳಿಯದಂತೆ ಎಚ್ಚರ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ.