ದಾಳಿ ವೇಳೆ ಭಾರಿ ಪ್ರಮಾಣದ ಸ್ಪೋಟಕ ಪತ್ತೆ, ದಾಖಲಾಯ್ತು ಕೇಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಸೊರಬ: ಚಂದ್ರಗುತ್ತಿ ಸಮೀಪದ ಬಸ್ತಿಕೊಪ್ಪದ ಕಲ್ಲು ಗಣಿಗಾರಿಕೆ (Stone quarrying / Quarry site) ಪ್ರದೇಶದಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು (Explosives) ಪತ್ತೆಹಚ್ಚುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬಸ್ತಿಕೊಪ್ಪದ ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿ (Gelatin sticks) ಹಾಗೂ ಅಮೋನಿಯಂ ನೈಟ್ರೇಟ್ (Ammonium nitrate) ಸಂಗ್ರಹಿಸಿಡಲಾಗಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ (Department of Mines and Geology) ಅಧಿಕಾರಿಗಳು ಜಂಟಿ ದಾಳಿ (Joint raid) ನಡೆಸಿದ್ದಾರೆ.

SORABA-NEWS

ಜಂಟಿ ದಾಳಿ ವೇಳೆ ಸಿಕ್ತು ಜಿಲೆಟಿನ್ ಕಡ್ಡಿ

ತನಿಖೆಯ ವೇಳೆ ಸ್ಥಳದಲ್ಲಿ ಅಕ್ರಮವಾಗಿ ಇಡಲಾಗಿದ್ದ 110 ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ಇರುವುದು ಪತ್ತೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಬಿಡಿಡಿಎಸ್ (BDDS – Bomb Detection and Disposal Squad) ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ತಂಡವು, ಸ್ಫೋಟಕಗಳನ್ನು ಭಾನುವಾರ ಮೂರು ಹಂತಗಳಲ್ಲಿ ಸ್ಫೋಟಿಸುವ ಮೂಲಕ ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದೆ (Defused). ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ (Police security / Police deployment) ಮಾಡಲಾಗಿತ್ತು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (FIR registered).