NEWS HIGHLIGHTS
ಸೊರಬ: ತಾಲೂಕಿನ ಆನವಟ್ಟಿ ಹೋಬಳಿ ಹಣಜಿ ಗ್ರಾಮದಲ್ಲಿ ಎರಡು ತಿಂಗಳ ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಹಣಜಿ ಗ್ರಾಮದ ಸ್ವಾತಿ (24) ಮೃತರು. ಇವರಿಗೆ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ ಎಂಬುವರೊಂದಿಗೆ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. 20 ದಿನಗಳ ಹಿಂದೆ ತವರು ಮನೆಗೆ ಬಂದಿದ್ದ ಸ್ವಾತಿ, ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸರಿಯಾಗಿ ಆಹಾರ ಸೇವಿಸದೆ ವಾಂತಿ ಮಾಡಿಕೊಳ್ಳುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸೋಮವಾರ ಪೋಷಕರು ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಸ್ವಾತಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ. ವಿಷಯ ತಿಳಿದ ನೆರೆಹೊರೆಯವರು ತಕ್ಷಣವೇ ಬಾಗಿಲು ಮುರಿದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.