SHIVAMOGGA LIVE NEWS | FACILITY | 5 ಜೂನ್ 2022
ಸೊರಬ ಮುಖ್ಯರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ನಾಮದೇವ ಗಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಚರಂಡಿ ವಿರುದ್ಧ ಜನಾಕ್ರೋಶಕ್ಕೆ ಕಾರಣ
ಕಾರಣ 1 – ಸುಮಾರು ಒಂದು ಕಿ.ಮೀ. ವ್ಯಾಪ್ತಿಯ ಕೊಳಚೆ ನೀರು ನಾಮದೇವ ಗಲ್ಲಿ ಚರಂಡಿಗೆ ಹರಿಸಲು ಯೋಜಿಸಲಾಗಿದೆ. ಹೊಟೇಲ್ ತ್ಯಾಜ್ಯವು ಇದರಲ್ಲಿ ಬರಲಿದೆ. ಈಗಾಗಲೆ ಎರಡು ಹೊಟೇಲ್ ತ್ಯಾಜ್ಯದಿಂದಲೇ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಎಲ್ಲೆಡೆಯ ಕೊಳಚೆ ಬಂದರೆ ಜನರಿಗೆ ಸಮಸ್ಯೆ ಉಂಟಾಗಲಿದೆ.
ಕಾರಣ 2 – ನಾಮದೇವ ಗಲ್ಲಿ ಸುತ್ತಲು ಅನೇಕ ಮಠ, ಮಂದಿರಗಳಿವೆ. ಶಿಕ್ಷಣ ಸಂಸ್ಥೆಗಳಿವೆ. ನಿತ್ಯ ನೂರಾರು ಜನರು ಇಲ್ಲಿ ಓಡಾಡುತ್ತಾರೆ. ಎಲ್ಲರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ.
ಕಾರಣ 3 – ನಾಮದೇವ ಗಲ್ಲಿ ಜನವಸತಿ ಪ್ರದೇಶವಾಗಿದೆ. ಕೊಳಚೆ ನೀರಿನ ದುರ್ವಾಸನೆಯಿಂದ ಜನರ ಬದುಕು ದುಸ್ತರವಾಗಲಿದೆ.
ಪುರಸಭೆಯಲ್ಲಿ ಚರ್ಚೆಗೆ ನಿರ್ಧಾರ
ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಅವರು, ಚರಂಡಿ ಸಮಸ್ಯೆ ಕುರಿತು ಪುರಸಭೆಯ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದ ಪ್ರತಿಭಟನಾಕಾರರನ್ನು ಸಮಾಧನಪಡಿಸಲು ಮುಂದಾದರು.
ಪಿಡಬ್ಲುಡಿ ಸಹಾಯಕ ಇಂಜಿನಿಯರ್ ನಾಗರಾಜ್ ಅವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆ ಸದಸ್ಯ ಡಿ.ಎಸ್.ಪ್ರಸನ್ನ ಕುಮಾರ ದೊಡ್ಮನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸ್ಥಳೀಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ನಗರಸಭೆಗೆ ಶಾಸಕರ ದಿಢೀರ್ ಭೇಟಿ, ಕಾಣೆಯಾದ ಫೈಲ್ ಪ್ರತ್ಯಕ್ಷ, ಅಧಿಕಾರಿಗಳಿಗೆ ಕ್ಲಾಸ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.