ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 28 ಆಗಸ್ಟ್ 2020
ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷರೆ ಧರಣಿ ನಡೆಸಿದ್ದಾರೆ. ಸಭೆಯ ವೇದಿಕೆ ಮುಂಭಾಗ ಸದಸ್ಯರೊಬ್ಬರ ಜೊತೆಗೆ ತಾಲೂಕು ಉಪಾಧ್ಯಕ್ಷರು ಧರಣಿ ನಡೆಸಿ, ಬೇಡಿಕೆ ಮುಂದಿಟ್ಟಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಪಾಧ್ಯಕ್ಷರ ಧರಣಿಗೆ ಕಾರಣವೇನು?
ಆನವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಜನರು ವಿರೋಧ ವ್ಯಕ್ತಪಡಿಸಿದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಘಟಕ ಸ್ಥಾಪಿಸಿದಂತೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಆಗಸ್ಟ್ 25ರಂದು ಪೊಲೀಸ್ ಬಂದೋಬಸ್ತ್ನಲ್ಲಿ, ಸಾರ್ವಜನಿಕ ಸ್ಥಳದಲ್ಲೇ ಘಟಕ ಸ್ಥಾಪನೆಗೆ ಇಒ ಮತ್ತು ಪಿಡಿಓಗಳು ಮುಂದಾಗಿದ್ದರು. ಇದನ್ನು ವಿರೋಧಿಸಿ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್ ಮತ್ತು ಸದಸ್ಯ ಹನುಮಂತಪ್ಪ ಧರಣಿ ನಡೆಸಿದರು.
ಧರಣಿ ವಾಪಸ್
ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸುವ ಬಗ್ಗೆ ಶಾಸಕರು ಮತ್ತು ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧ್ಯಕ್ಷೆ ನಯನಾ ಹೆಗಡೆ ಮತ್ತು ಸದಸ್ಯರು ನಿರ್ಣಯ ಕೈಗೊಂಡರು. ಆ ಬಳಿಕ ಧರಣಿ ಹಿಂಪಡೆಯಲಾಯಿತು.
ಏನೆಲ್ಲ ಚರ್ಚೆಯಾಯ್ತು?
ಎಂಟು ತಿಂಗಳಿಂದ ಶಿಕ್ಷಕರಿಗೆ ವೇತನ ಬಿಡುಗಡೆಯಾಗಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಲಕ್ಷ್ಯದಿಂದಾಗಿ 44 ಲಕ್ಷ ಹಣ ವಾಪಸ್ ಹೋಗಿದೆ ಎಂದು ಸದಸ್ಯ ನಾಗರಾಜ್ ಚಿಕ್ಕಸವಿ ಅವರು ಸಭೆಯ ಗಮನಕ್ಕೆ ತಂದರು. ಎರಡು ದಿನದಲ್ಲಿ ಸಮಸ್ಯೆ ಬಗೆಹರಿಯಬೇಕು ಎಂದು ಅಧ್ಯಕ್ಷೆ ನಯನಾ ಹೆಗಡೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.
ಆನವಟ್ಟಿಯಲ್ಲಿ ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯ, ಸೊರಣಗಿ, ನೇರಲಗಿ, ಚಂದ್ರಗುತ್ತಿಯಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನಗಳ ಕಾಮಗಾರಿ ಕಳಪೆಯಾಗಿದೆ. ಹಾಗಾಗಿ ಬಿಲ್ ಪಾವತಿಸದಂತೆ ನಿರ್ಣಯ ಕೈಗೊಂಡು, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಲು ನಿರ್ಣಯ ಕೈಗೊಳ್ಳಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]