‘ಇದು ರಾಕ್ಷಸಿ ಕೃತ್ಯ, ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು, ಪರಿಹಾರ ನೀಡಬೇಕು’, ಸಂಸದ ರಾಘವೇಂದ್ರ ಆಗ್ರಹ

ಸೊರಬ: ತಾಲೂಕಿನ ಆನವಟ್ಟಿ ಹೋಬಳಿಯ ತೆವರತೆಪ್ಪ ಗ್ರಾಮದಲ್ಲಿ ರೈತ ದೇವರಾಜ್ ಅವರ ಅಡಿಕೆ ತೋಟವನ್ನು ಅಧಿಕಾರಿಗಳು ನೋಟಿಸ್ ನೀಡದೆ ಕಡಿದು ತೆರವುಗೊಳಿಸಿರುವುದು ರಾಕ್ಷಸ ಕೃತ್ಯವಾಗಿದೆ. ಇದು ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧಿಕಾರದ ದರ್ಪಕ್ಕೆ ನಿದರ್ಶನ. ಆದ್ದರಿಂದ ಕೂಡಲೆ ರೈತನಿಗೆ ಪರಿಹಾರ ನೀಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. (ಈ ಸುದ್ದಿಯನ್ನು ಇನ್ನು 59 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ರೈತ ದೇವರಾಜ್‌ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಮುನ್ಸೂಚನೆ ಅಥವಾ ನೋಟಿಸ್ ನೀಡದೆ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಫಸಲಿಗೆ ಬಂದಿದ್ದ ಸಾವಿರಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕತ್ತರಿಸಿದ್ದಾರೆ. ಇದು ಅಕ್ಷಮ್ಯ. ಕಾನೂನು ಹೋರಾಟಕ್ಕೆ ಅವಕಾಶವಿದ್ದರೂ ಏಕಾಏಕಿ ಈ ರೀತಿ ದೌರ್ಜನ್ಯ ಎಸಗಲಾಗಿದೆ ಎಂದರು.

BY-Raghavendra-protest-at-Soraba

ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದಕ್ಕೆ ರೈತನ ಮಗನ ವಿರುದ್ಧ ದ್ವೇಷ ತೀರಿಸಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಒಂದೆಡೆ ಮುಖ್ಯಮಂತ್ರಿಗಳು ಬಗರ್ ಹುಕುಂ ಸಾಗುವಳಿದಾರರ ಭೂಮಿ ಮುಟ್ಟುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಸ್ವಕ್ಷೇತ್ರದಲ್ಲೇ ಬಡ ರೈತರ ಮೇಲೆ ಇಂತಹ ಅನ್ಯಾಯ ನಡೆಯುತ್ತಿದ್ದರೂ ಯಾರೂ ಕೇಳುವವರಿಲ್ಲ ಎಂದು ಸಂಸದ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಸರ್ಕಾರದ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ರೈತನಿಗೆ ಸೂಕ್ತ ಪರಿಹಾರ ನೀಡಬೇಕು. ರೈತನ ತೋಟವನ್ನು ಕಡಿದ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಘವೇಂದ್ರ ಆಗ್ರಹಿಸಿದರು.