SORABA, 5 AUGUST 2024 : 22 ವರ್ಷ ಭಾರತೀಯ ಸೇನೆಯಲ್ಲಿ ಯೋಧರಾಗಿ (Soldier) ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದ ಸೊರಬ ತಾಲೂಕು ಹೆಸರಿ ಗ್ರಾಮದ ಯೋಧ ಶಿವಮೂರ್ತಿ ಅವರನ್ನು ಗ್ರಾಮಸ್ಥರು ಭಾನುವಾರ ಅದ್ದೂರಿಯಾಗಿ ಸ್ವಾಗತಿಸಿದರು.
ಯೋಧ ಶಿವಮೂರ್ತಿ ಆಗಮನದ ಹಿನ್ನೆಲೆ ಗ್ರಾಮಸ್ಥರು ಗ್ರಾಮವನ್ನು ತಳಿರು, ತೋರಣಗಳಿಂದ ಸಿಂಗರಿಸಿದ್ದರು. ಶಿವಮೂರ್ತಿ ಅವರು ಭಾನುವಾರ ಸಂಜೆ ಗ್ರಾಮಕ್ಕೆ ಬರುತ್ತಿದ್ದಂತೆ ಆರತಿ ಬೆಳಗಿ, ಸಿಡಿಮದ್ದು ಸಿಡಿಸಿ ಸಂಭ್ರಮಪಟ್ಟರು. ಶಿವಮೂರ್ತಿ ಅವರಿಂದ ಕೇಕ್ ಕತ್ತರಿಸಿ ಪರಿಸ್ಪರ ಹಂಚಿ ಖುಷಿ ಪಟ್ಟರು.
![]() |
ಎಲ್ಲೆಲ್ಲಿ ಸೇವೆ ಸಲ್ಲಿಸಿದ್ದರು?
ಶಿವಮೂರ್ತಿ ಅವರು ಜಮ್ಮು – ಕಾಶ್ಮೀರ, ದಿಲ್ಲಿ, ಪಶ್ಚಿಮ ಬಂಗಾಳ, ಪಂಜಾಬ್, ಗುಜರಾತ್ ಸೇರಿದಂತೆ ವಿವಿಧೆಡೆ ಸೇವೆ ಸಲ್ಲಿಸಿದ್ದರು. ಅನೇಕ ಪ್ರಮುಖ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. ಶಿವಮೂರ್ತಿ ಅವರನ್ನು ಗ್ರಾಮದಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.
ದೇಶ ಸೇವೆ ನನಗೆ ತೃಪ್ತಿ ತಂದಿದೆ. ಯುವ ಜನರು ದೇಶಪ್ರೇಮ ಬೆಳೆಸಿಕೊಳ್ಳಬೇಕು. 22 ವರ್ಷದ ಸುದೀರ್ಘ ಅನುಭವವನ್ನು ಶಾಲೆ, ಕಾಲೇಜುಗಳಲ್ಲಿ ಹಂಚಿಕೊಳ್ಳುತ್ತೇನೆ. ಇದರಿಂದ ಮಕ್ಕಳಿಗೆ ಸೇನೆಗೆ ಸೇರುವ ಪ್ರೇರಣೆ ದೊರೆಯಲಿದೆ. ದೇಶಾಭಿಮಾನ, ಶಿಸ್ತು ಮೈಗೂಡಿಸಿಕೊಳ್ಳಲು ಅನುಕೂಲ ಆಗಲಿದೆ. ಶಿವಮೂರ್ತಿ, ನಿವೃತ್ತ ಯೋಧ
ಇಂಡುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೇದಮೂರ್ತಿ, ಶಿವಮೂರ್ತಿ ಅವರ ಪತ್ನಿ ಅನುಪಮಾ, ಮಕ್ಕಳಾದ ಮೌಲ್ಯ, ವೃತಿಕ್, ತಾಯಿ ನಿಂಗಮ್ಮ, ಗ್ರಾಮ ಸಲಹಾ ಸಮಿತಿ ಅಧ್ಯಕ್ಷ ರಮೇಶ, ಗ್ರಾಮ ಪಂಚಾಯಿತಿ ಸದಸ್ಯ ಯೋಗೇಶ್, ಉಮೇಶ್, ರಾಜಪ್ಪ, ನೇಮಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬಿದರೆವರೆಗೆ ಕಾರು ಬೆನ್ನಟ್ಟಿ ಹೋಗಿ ಯುವಕರಿಂದ ಚಾಲಕನಿಗೆ ಮನಸೋಯಿಚ್ಛೆ ಥಳಿತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200