ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA NEWS | 2 ಆಗಸ್ಟ್ 20210
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಮನೆಯ ಪಕ್ಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟದ್ದ ಲಕ್ಷಾಂತರ ರೂ. ಮೌಲ್ಯದ ಒಣ ಶುಂಠಿ, ಭತ್ತ ಹಾಗೂ ನಾಟ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾದ ದುರ್ಘಟನೆ ತಾಲ್ಲೂಕಿನ ಆಗಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ವಾರಹಳ್ಳಿಯಲ್ಲಿ ನಡೆದಿದೆ.
ದ್ವಾರಹಳ್ಳಿ ಗ್ರಾಮದ ವಕೀಲ ಶಿವಪ್ಪ ಅವರ ಮನೆಯ ಪಕ್ಕದಲ್ಲಿ ದಾಸ್ತಾನು ಇರಿಸಿದ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಶಬ್ದ ಬರುವುದನ್ನು ಕೇಳಿ ಕುಟುಂಬದವರು ದಿಕ್ಕು ತೋಚದೇ ಕೂಗಿದ್ದಾರೆ.
ಸ್ಥಳೀಯರ ನೆರವಿನೊಂದಿಗೆ ಹಾನಗಲ್ ಮತ್ತು ಸೊರಬ ಅಗ್ನಿ ಶಾಮಕ ಸಿಬ್ಬಂದಿ ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದ್ದು, ನೆರೆಯ 5 ಮನೆಗಳಿಗೆ ಬೆಂಕಿ ಆವರಿಸುವುದನ್ನು ಸಹ ತಪ್ಪಿಸಿದ್ದಾರೆ.
ಸುಮಾರು 10 ಲಕ್ಷ ರೂ., ಮೌಲ್ಯದ ಒಣ ಶುಂಠಿ, ಸುಮಾರು 100 ಅಡಿ ತೇಗ ಮತ್ತು ಹೊನ್ನೆ ನಾಟ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ. ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಯಲ್ಲಪ್ಪ ಸ್ಥಳಕ್ಕೆ ತರಳಿ ವರದಿ ಸಲ್ಲಿಸಿದ್ದಾರೆ.
VIDEO NEWS
ವಿಷಯ ತಿಳಿದು ಸ್ಥಳಕ್ಕೆ ಜೆಡಿಎಸ್ ಆನವಟ್ಟಿ ಬ್ಲಾಕ್ ಅಧ್ಯಕ್ಷ ಬಾಸೂರು ಚಂದ್ರೇಗೌಡ ಸೇರಿದಂತೆ ಮತ್ತಿತರರು ಭೇಟಿ ನೀಡಿದ್ದು, ನಷ್ಟಕ್ಕೆ ಒಳಗಾದ ಶಿವಪ್ಪ ಅವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಒತ್ತಾಯಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















