ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021
ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದರು. ಮಧು ಬಂಗಾರಪ್ಪ ಅವರು ಈಗ ಕಾಂಗ್ರೆಸ್ ಸೇರ್ಪಡೆ ಸೂಕ್ತ ನಿರ್ಧಾರವಾಗಿದೆ. ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ | ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ
ಸೊರಬ ತಾಲೂಕು ಕುಬಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವಾಗ ಇದೆ ರೀತಿಯ ಪ್ರಶ್ನೆಗಳನ್ನು ಕೇಳಬೇಕಾಗಿ ಬಂದಿತ್ತು. ಕೊನೆಗೆ ನಾನು ಮುಖ್ಯಮಂತ್ರಿಯಾದೆ. ಕಾಂಗ್ರೆಸ್ ಪಕ್ಷ ಭವಿಷ್ಯ ರೂಪಿಸುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಪಕ್ಷದಲ್ಲಿ ಉತ್ತಮ ಅವಕಾಶಗಳು ಸಿಗುತ್ತವೆ ಎಂದು ಉತ್ತಮ ಸ್ಥಾನಮಾನದ ಸಿಗುವ ಕುರಿತು ಸುಳಿವು ನೀಡಿದರು.
ಯಾವುದೇ ಭರವಸೆ ಈಡೇರಿಸಿಲ್ಲ
2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಯಾವುದೇ ಭರವಸೆ ಈಡೇರಿಸಿಲ್ಲ. ಇದರಿಂದ ಜನ ನೊಂದಿದ್ದಾರೆ. ಜೊತೆಗೆ ಬೆಲೆಯೇರಿಕೆ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಆರೋಪಿಸಿದರು.
ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಎರಡು ಕಾರಣ ನೀಡುತ್ತಿದೆ. ಒಂದು ಹಿಂದಿನ ಯು.ಪಿ.ಎ ಸರ್ಕಾರ ಕಚ್ಚಾತೈಲದ ಮೇಲೆ ಸಾಲ ಮಾಡಿತ್ತು. ಎರಡನೆಯದು ಬೆಲೆಯೇರಿಕೆಯಿಂದ ಬಂದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಖರ್ಚು ಮಾಡುತ್ತಿದ್ದೇವೆ. ಇದನ್ನು ಮನ್ ಕೀ ಬಾತ್ ನಲ್ಲಿ ಮೋದಿಯವರು ಹೇಳಿದ್ದಾರೆ. ತೈಲಬಾಂಡ್ ಖರೀದಿ ಆರಂಭ ಮಾಡಿದ್ದು ವಾಜಪೇಯಿ ಸರ್ಕಾರ. 1 ಲಕ್ಷದ 40 ಸಾವಿರ ತೈಲಬಾಂಡ್ ಖರೀದಿ ಮಾಡಲಾಗಿದೆ ಎಂದರು.
ಈವರೆಗೆ ತೀರಿಸಿರುವ ಸಾಲ 3500 ಕೋಟಿ. ವಾರ್ಷಿಕ 10,000 ಕೋಟಿ ಬಡ್ಡಿ ಕಟ್ಟಲಾಗಿದೆ. 2014ರಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 9 ರೂಪಾಯಿ 21 ಪೈಸೆ, ಡೀಸೆಲ್ 3 ರೂಪಾಯಿ 45 ಪೈಸೆ ಇತ್ತು. ಈಗ ಡೀಸೆಲ್ ಮೇಲೆ 31 ರೂಪಾಯಿ 84 ಪೈಸೆ, ಪೆಟ್ರೋಲ್ ಮೇಲೆ 32 ರೂಪಾಯಿ 98 ಪೈಸೆ ಗೆ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200