ಶಿವಮೊಗ್ಗ ಲೈವ್.ಕಾಂ | SORABA NEWS | 17 ಜೂನ್ 2020
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಶಿರಸಿಯಿಂದ ತವನಂದಿ ಮಾರ್ಗವಾಗಿ ಬರುತ್ತಿದ್ದಾಗ ಹಳೆ ಸೊರಬ ಬಳಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಂತೋಷ್ (25) ಮೃತ ದುರ್ದೈವಿ. ಅಪಘಾತದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂತೋಷ್ ಅವರು ಕೊನೆಯುಸಿರೆಳೆದಿದ್ದಾರೆ. ಇವರು ಶಿರಸಿಯವರು ಎಂದು ತಿಳಿದು ಬಂದಿದೆ.
ಚಾಲಕ ರಾಘವ ಮತ್ತು ಕಾರಿನಲ್ಲಿದ್ದ ಗಣಪತಿ ಎಂಬುವವರಿಗೆ ಗಾಯವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಸಿಪಿಐ ಮರುಳಸಿದ್ದಪ್ಪ, ಪಿಎಸ್‍ಐ ಪ್ರಶಾಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]