ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ, ಎರಡೆ ತಿಂಗಳಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಸಂಗ್ರಹ

SHIVAMOGGA LIVE NEWS | TEMPLE | 26 ಮೇ 2022➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸೊರಬ ತಾಲೂಕು ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. 22.71 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ.

ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ಅವರ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು. 22,71,900 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುತ್ತಿದ್ದ ಕೊಠಡಿ ಸುತ್ತಲು ಸಿಸಿಟಿವಿ ಅಳವಡಿಸಲಾಗಿತ್ತು.

ಮಾರ್ಚ್ ತಿಂಗಳಲ್ಲಿ ಚಂದ್ರಗುತ್ತಿ ದೇಗುಲದ ಹುಂಡಿ ಎಣಿಕೆ ಮಾಡಿದಾಗ 24.54 ಲಕ್ಷ ರೂ. ಸಂಗ್ರಹವಾಗಿತ್ತು. ಕೇವಲ ಎರಡು ತಿಂಗಳ ಅಂತರದಲ್ಲಿ ಹುಂಡಿಯಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ತಹಶೀಲ್ದಾರ್ ಯು.ವೆಂಕಟೇಶ್, ರಾಜಸ್ವ ನಿರೀಕ್ಷಕ ವಿ.ಎಲ್.ಶಿವಪ್ರಸಾದ್, ದೇವಸ್ಥಾನದ ಅಡಳಿತ ಕಾರ್ಯನಿರ್ವಹಣಾಧಿಕಾರಿ ಎನ್.ಆರ್.ರಂಗಪ್ಪ, ಶಿರಸ್ತೇದಾರ್ ನಿರ್ಮಾ, ಮುಜರಾಯಿ ಇಲಾಖೆಯ ಎಂ.ಶೃತಿ, ರತ್ನಾಕರ ಶಾನುಭೋಗ, ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನದ ಸಿಬ್ಬಂದಿ ಇದ್ದರು.

Shimoga Nanjappa Hospital

ಇದನ್ನೂ ಓದಿ – ಸಿಗಂದೂರು ಲಾಂಚ್ ನೌಕರ ಹೃದಯಾಘಾತದಿಂದ ಸಾವು, ಕಂಬನಿ ಮಿಡಿದ ಜನ, ಶಾಸಕರು

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment