ಶಿವಮೊಗ್ಗ ಲೈವ್.ಕಾಂ | SORABA NEWS | 30 ಜೂನ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸೊರಬ ಪಟ್ಟಣದ ಮುಖ್ಯರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಹಾಗಾಗಿ ಸೊರಬ ಪಟ್ಟಣ ಸಂಪೂರ್ಣ ನಿಶಬ್ದವಾಗಿದೆ.
ಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ರಸ್ತೆಯನ್ನು ಬಂದ್ ಮಾಡಲಾಗಿದೆ. ಸೀಲ್ ಡೌನ್ ಪ್ರದೇಶದಲ್ಲಿ ವಾಹನಗಳು ಮತ್ತು ಜನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಮುಖ್ಯ ರಸ್ತೆಯಲ್ಲಿ ಸಂಪೂರ್ಣ ಸ್ಯಾನಿಟೈಸೇನಷ್ ಮಾಡಲಾಗಿದೆ.

ಸಣ್ಣ ಜ್ವರದ ಲಕ್ಷಣ
ಪಟ್ಟಣದಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರು ವೈದ್ಯರಲ್ಲಿ ಪರೀಕ್ಷೆಗೆ ತೆರಳಿದ್ದರು. ಈ ವೇಳೆ ಕರೋನ ಪರೀಕ್ಷೆ ಮಾಡಿಸಲಾಗಿದೆ. ಇವರಿಗೆ ಕರೋನ ಇರುವುದು ದೃಢವಾಗುತ್ತಿದ್ದಂತೆ ಸೋಮವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸೋಂಕಿತ ವ್ಯಕ್ತಿಯ ಕುಟುಂಬದವರನ್ನು ಕ್ವಾರಂಟೈನ್‍ಗೆ ಒಳಪಡಿಸಿ, ಆರೋಗ್ಯ ತಪಾಸಣೆ ನಡೆಸಲಾಗಿದೆ.
ಪಟ್ಟಣ ಸಂಪೂರ್ಣ ಮೌನ
ಮುಖ್ಯ ರಸ್ತೆ ಸೀಲ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಸೊರಬ ಪಟ್ಟಣದಲ್ಲಿ ಮೌನ ಆವರಿಸಿದೆ. ಜನರು ಮನೆಯಿಂದ ಹೊರ ಬಾರದಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ ಮುಖ್ಯರಸ್ತೆ ಬಂದ್ ಆಗಿರುವುದರಿಂದ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






