BREAKING NEWS | ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಗೆ ತಡೆ, ಪ್ರಕ್ರಿಯೆ ನಾಲ್ಕು ವಾರ ಮುಂದಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 9 ಮೇ 2019

ಸೊರಬ ಪಟ್ಟಣ ಪಂಚಾಯಿತಿಗೆ, ಮೇ 29ಕ್ಕೆ ನಿಗದಿಯಾಗಿದ್ದ ಚುನಾವಣೆಗೆ, ಹೈಕೋರ್ಟ್ ತಡೆ ನೀಡಿದೆ. ನಾಲ್ಕು ವಾರ ಚುನಾವಣೆಯನ್ನು ಮುಂದೂಡುವಂತೆ, ನ್ಯಾಯಾಲಯ ಆದೇಶ ನೀಡಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮೇ 8ರಂದು ನ್ಯಾಯಾಲಯ ಆದೇಶ ನೀಡಿದ್ದು, ಅದರಂತೆ ಇವತ್ತು ರಾಜ್ಯ ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಸೂಚನೆ ನೀಡಿದೆ.

ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧ, ಹೈಕೋರ್ಟ್’ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಉಳಿದಂತೆ ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ, ಹೊಸನಗರದ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಯಲಿದೆ. ಇವತ್ತು ಈ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಅಧಿಸೂಚನೆ ಪ್ರಕಟವಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment