ಶಿವಮೊಗ್ಗ ಲೈವ್.ಕಾಂ | SORABA NEWS | 1 ಜುಲೈ 2020
ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಸೊರಬ ಪಟ್ಟಣವನ್ನು ಸೀಲ್ ಡೌನ್ ಮಾಡಲಾಗಿದೆ. ಕಳೆದ ಎರಡು ವರ್ಷದಿಂದ ಪತ್ನಿ ಮತ್ತು ಮಗನೊಂದಿಗೆ ಪಟ್ಟಣದ ಮನೆಯೊಂದರಲ್ಲಿ ವಾಸವಾಗಿದ್ದರು.
![]() |
ಜ್ವರ ಬಂದಿತ್ತು
ಸೋಂಕಿತ ವ್ಯಕ್ತಿ ಆಂಧ್ರಪ್ರದೇಶಕ್ಕೆ ಹೋಗಿ ಹಿಂತಿರುಗಿದ್ದರು ಎಂದು ಹೇಳಲಾಗುತ್ತಿದೆ. ಸೊರಬಕ್ಕೆ ವಾಪಸ್ ಬಂದ ಕೆಲವು ದಿನದ ಬಳಿಕ ಅವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದ್ದಾಗ ಸ್ವ್ಯಾಬ್ ಟೆಸ್ಟ್‍ಗೆ ಒಳಗಾಗುವಂತೆ ಸೂಚಿಸಲಾಗಿತ್ತು. ಅದರಂತೆ ಜೂ.26ರಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿಕೊಂಡಿದ್ದರು.
ಆತಂಕ ಹುಟ್ಟಿಸಿದ ಭೇಟಿಗಳು
ಸೋಂಕಿತ ವ್ಯಕ್ತಿ ಕೆಲಸದ ನಿಮಿತ್ತ ತಾಲೂಕಿನ ವಿವಿಧೆಡೆ ಭೇಟಿ ನೀಡಿದ್ದರು. ಹಲವರನ್ನು ಭೇಟಿಯಾಗಿದ್ದರು. ಅಲ್ಲದೆ ಕೆಲವು ಸಭೆಗಳಲ್ಲೂ ಭಾಗವಹಿಸಿದ್ದರು ಎಂದು ಹೇಳಲಾಗುತ್ತಿದೆ. ಇದರಿಂದ ಸಂಪರ್ಕದಲ್ಲಿರುವವರಲ್ಲಿ ಆತಂಕ ಮೂಡಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200