ಸೊರಬದ ಪುರದೈವ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

Published On : ಮೇ 24, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 24 MAY 2024

SORABA : ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ ( Ranganatha Swamy) ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು. ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವರ ಕೃಪೆ ಬೇಡಿದರು.

ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಅವರು ಪೂಜಾ ಕೈಂಕರ್ಯ ನೇತೃತ್ವ ವಹಿಸಿದ್ದರು. ತಹಸೀಲ್ದಾ‌ರ್ ಹುಸೇನ್ ಸರಕಾವಸ್ ರಥೋತ್ಸವಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ – ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಆಸ್ಪತ್ರೆಗೆ ದಾಖಲು

ಭಕ್ತರು ಕಳಸಕ್ಕೆ ಬಾಳೆಹಣ್ಣು, ಉತ್ತುತ್ತೆ, ಕಾಳು ಮೆಣಸು ಬೀರುವ ಮೂಲ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಮುಂಭಾಗ ಕೊಂಚ ದೂರ ಮಾತ್ರ ರಥ ಎಳೆಯಲಾಯಿತು. ರಥೋತ್ಸವ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಅನ್ನಸಂತರ್ಪಣೆ ನಡೆಸಲಾಯಿತು.

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 24, 2024

Leave a Comment