ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್‌ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 AUGUST 2023

SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿಯ  ಶ್ರೀ ರೇಣುಕಾಂಬ ದೇವಿ ದೇವಸ್ಥಾನಕ್ಕೆ (Chandragutti Renukamba Temple) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಭೇಟಿ ನೀಡಿದ್ದರು. ಈಚೆಗೆ ದೇವಸ್ಥಾನದಲ್ಲಿ ಕಳ್ಳತನ (Theft) ಯತ್ನ ನಡೆದಿತ್ತು. ಈ ಹಿನ್ನೆಲೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ಮಹತ್ವ ಪಡೆದಿತ್ತು.

ಇನ್ನು, ಭೇಟಿ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನದಲ್ಲಿ ಶ್ರಾವಣ ಪೂಜೆ, ಹೋಮ, ನವಗ್ರಹ ಪೂರ್ವಕ ಸಂಪ್ರೋಕ್ಷಣೆ

6 ಪ್ರಮುಖ ವಿಚಾರ ಪ್ರಸ್ತಾಪ

ಪಾಯಿಂಟ್‌ 1 – ಚಂದ್ರಗುತ್ತಿ ದೇವಸ್ಥಾನದಲ್ಲಿ ಉಂಟಾಗುವ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಬಂಧಪಟ್ಟ ಇಲಾಖೆ ಸಹಯೋಗದೊಂದಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.

ಪಾಯಿಂಟ್‌ 2 – ಕೆಲವು ದಿನಗಳ ಹಿಂದೆ ದೇವಸ್ಥಾನದಲ್ಲಿ ಕಳ್ಳತನ ಯತ್ನವಾಗಿತ್ತು. ಘಟನೆಗೆ ಸಂಬಂಧಿಸಿದಂತೆ, ಕೃತ್ಯವೆಸಗಿದ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಪೊಲೀಸರು (police) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದು ಜಿಲ್ಲಾ ಪೊಲೀಸ್‌ಗೆ ಹೆಮ್ಮೆ ತರುವ ಕೆಲಸ.

ಪಾಯಿಂಟ್‌ 3 – ಚಂದ್ರಗುತ್ತಿಯಲ್ಲಿ ಹೆಚ್ಚಿನ ಜನಸಂದಣಿ ಇದ್ದು, ಜೇಬುಗಳ್ಳತನ, ಸರಗಳ್ಳತನದಂತಹ ಕೃತ್ಯಗಳು ಜರುಗುವುದನ್ನು ತಡೆಗಟ್ಟಲು ಮತ್ತು ಶೀಘ್ರವಾಗಿ ಪತ್ತೆ ಹಚ್ಚಲು ಸಹಕಾರಿಯಾಗಲು ದೇವಸ್ಥಾನದ ಸುತ್ತಮುತ್ತ ಮತ್ತು ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ದೇವಸ್ಥಾನ ಕಮಿಟಿ ಮತ್ತು ಜಿಲ್ಲಾಧಿಕಾರಿಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನಕ್ಕೆ ಸಾವಿರ ಸಾವಿರ ಭಕ್ತರು, ವಿಶೇಷ ಪೂಜೆ, ಹೇಗಿತ್ತು ಪೂಜೆ ವೈಭವ?

ಪಾಯಿಂಟ್‌ 4 – ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ನೆರವಾಗುವಂತೆ, ಈಗಾಗಲೇ ಚಂದ್ರಗುತ್ತಿಯಲ್ಲಿ ಇರುವ ಪೊಲೀಸ್ ಉಪ ಠಾಣೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಹೋಂ ಗಾರ್ಡ್ ಅಥವಾ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಕ್ರಮ. ಚಂದ್ರಗುತ್ತಿ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆಯನ್ನು ತೆರೆಯುವಂತೆ ಸಾರ್ವಜನಿಕರು ಕೋರಿದ್ದು, ಈ ಬಗ್ಗೆ ಇಲಾಖಾ ಮಾನದಂಡಗಳ ಆಧಾರದ ಮೇಲೆ ಪರಿಶೀಲಿಸಲಾಗುವುದು.

ಪಾಯಿಂಟ್‌ 5 – ಮಂಗಳವಾರ ಮತ್ತು ಶುಕ್ರವಾರ, ಹುಣ್ಣಿಮೆ, ಹಬ್ಬ ಹರಿದಿನ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಉಂಟಾಗುವ ವಿಶೇಷ ದಿನಗಳಂದು, ಸಂಚಾರ ದಟ್ಟಣೆ ಮತ್ತು ಸಾರ್ವಜನಿಕ ನೂಕು ನುಗ್ಗಲು ತಡೆಗಟ್ಟಲು ಸಹಕಾರಿಯಾಗಲು ಆ ದಿನಗಳಂದು ಮಹಿಳಾ ಪೊಲೀಸ್ ಸಿಬ್ಬಂದಿ, ಹೋಂ ಗಾರ್ಡ್ ಮತು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತದೆ.

ಪಾಯಿಂಟ್‌ 6 – ಹೊರ ಊರುಗಳಿಂದ ಬರುವ ಜನ ಯಾತ್ರಿ ನಿವಾಸ, ಲಾಡ್ಜ್, ಹೋಟೆಲ್ ಗಳಲ್ಲಿ ತಂಗುತ್ತಾರೆ. ಲಾಡ್ಜ್ ಮತ್ತು ಹೋಟೆಲ್ ಮಾಲೀಕರು, ವ್ಯವಸ್ಥಾಪಕರು ಆಗ ಕಡ್ಡಾಯವಾಗಿ ಅವರ ಗುರುತಿನ ಚೀಟಿ ಪಡೆದುಕೊಳ್ಳಬೇಕು.

ಇದನ್ನೂ ಓದಿ- ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ವ್ಯಾನಿಟಿ ಬ್ಯಾಗ್‌ ಗಮನಿಸಿದ ನ್ಯಾಮತಿಯ ಮಹಿಳೆಗೆ ಕಾದಿತ್ತು ಆಘಾತ

ಶಿಕಾರಿಪುರ ಉಪ ವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸೊರಬ ಇನ್ಸ್‌ಪೆಕ್ಟರ್‌ ರಾಜಶೇಖರ್, ಪಿಎಸ್‌ಐ ನಾಗರಾಜ್ ಹೆಚ್.ಎನ್, ಚಂದ್ರಗುತ್ತಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್ ಆರ್.ಐ, ಪ್ರಸನ್ನ ಸೇಠ್, ಚಂದ್ರಗುತ್ತಿ ದೇವಸ್ಥಾನ ಕಮಿಟಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು  ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 19, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment