ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 JUNE 2024
SORABA : ಲೋಕಸಭೆ ಚುನಾವಣೆಯಲ್ಲಿ ನಾಲ್ಕನೆ ಬಾರಿ ಗೆಲುವು ಸಾಧಿಸಿರುವ ಬಿ.ವೈ.ರಾಘವೇಂದ್ರ ಕೇಂದ್ರ ಸಚಿವರಾಗಲಿ (Minister) ಎಂದು ಪೂಜೆ ಸಲ್ಲಿಸಲಾಗಿದೆ. ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದೇಗುಲದಲ್ಲಿ ಸೊರಬ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.
ಬಿ.ವೈ.ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ವಿಮಾನಯಾನ ಅಥವಾ ರೈಲ್ವೆ ಖಾತೆ ದೊರೆಯಲಿ ಎಂದು ಪೂಜೆ ಸಲ್ಲಿಸಲಾಯಿತು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ಜಿಲ್ಲಾ ಕಾರ್ಯದರ್ಶಿ ಆಶೀಕ್ ನಾಗಪ್ಪ, ಗೋ ಸಂರಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಚಿದಾನಂದಗೌಡ, ಪ್ರಮುಖರಾದ ಗುರುಮೂರ್ತಿ ದೇವತಿಕೊಪ್ಪ, ಹರೀಶ್ ವಿದ್ಯುತ್ ನಗರ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422