SHIVAMOGGA LIVE NEWS | ACCIDENT NEWS| 13 ಏಪ್ರಿಲ್ 2022
ಮಾರಿ ಜಾತ್ರೆಗೆ ಹೋಗಿ ಊರಿಗೆ ಮರಳುತ್ತಿದ್ದಾಗ ಟಾಟಾ ಏಸ್ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವತ್ತು ಅವರ ಅಂತ್ಯಕ್ರಿಯೆ ನೆರವೇರಿದ್ದು ಶಾಸಕ ಕುಮಾರ್ ಬಂಗಾರಪ್ಪ ಅವರು ಭಾಗವಹಿಸಿದ್ದರು.
ತವನಂದಿ ಗ್ರಾಮದ ತಿಮ್ಮಪ್ಪ (45), ಯೋಗರಾಜ (55), ಆಕಾಶ್ (15) ಮೃತರು. ತವನಂದಿಯಿಂದ ಟಾಟಾ ಏಸ್ ವಾಹನದಲ್ಲಿ ಸಾಗರ ತಾಲೂಕು ಗುತ್ನಳ್ಳಿ ಗ್ರಾಮದ ಮಾರಿಜಾತ್ರೆಗೆ ತೆರಳಿದ್ದರು. ಜಾತ್ರೆಯಿಂದ ರಾತ್ರಿ ಹಿಂತಿರುಗುತ್ತಿದ್ದಾಗ ಬಸವಾಸಿ ಮುಖ್ಯರಸ್ತೆಯ ಚಿತ್ರಟ್ಟಿಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಮರಕ್ಕೆ ಡಿಕ್ಕಿ ಹೊಡೆದ ವಾಹನ
ತವನಂದಿ ಗ್ರಾಮದ ಹನುಮಂತಪ್ಪ ಅವರು ಟಾಟಾ ಏಸ್ ವಾಹನವನ್ನು ಚಲಾಯಿಸುತ್ತಿದ್ದರು. ರಾತ್ರಿ 1 ಗಂಟೆ ಊರಿಗೆ ಮರಳುತ್ತಿದ್ದ ವೇಳೆ ಮರಕ್ಕೆ ವಾಹನ ಡಿಕ್ಕಿಯಾಗಿದೆ. ಹನುಮಂತಪ್ಪ ಅವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದೆ ಘಟನೆಗೆ ಕಾರಣ ಎಂದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
11 ಜನರಿಗೆ ಗಾಯ
ಮರಕ್ಕೆ ಡಿಕ್ಕಿಯಾಗಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸೊರಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಶಾಸಕ
ಇವತ್ತು ತವನಂದಿ ಗ್ರಾಮದಲ್ಲಿ ತಿಮ್ಮಪ್ಪ, ಯೋಗರಾಜ ಮತ್ತು ಆಕಾಶ್ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬದವರು, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಶಾಸಕ ಕುಮಾರ್ ಬಂಗಾರಪ್ಪ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಕುಟುಂಬದವರಿಗೆ ಸಾಂತ್ವನ ಹೇಳಿದರು. ಇನ್ನು, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಅಪಘಾತ ಪ್ರಕರಣ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200