ಚಂದ್ರಗುತ್ತಿ ದೇಗುಲ; ಹುಂಡಿಯಲ್ಲಿದ್ದ ನಾಣ್ಯ ಎಣಿಕೆ, ಎಷ್ಟು ಸಂಗ್ರಹವಾಗಿತ್ತು?

ಸೊರಬ: ತಾಲೂಕಿನ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿಯ ನಾಣ್ಯಗಳ ಎಣಿಕೆ ಕಾರ್ಯವು ಆಡಳಿತ ಮಂಡಳಿ ಕಚೇರಿಯಲ್ಲಿ ಜರುಗಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಿತು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹುಣ್ಣಿಮೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ಭಕ್ತರು ಸಮರ್ಪಿಸಿದ್ದ ಕಾಣಿಕೆ ನಾಣ್ಯಗಳಿಂದ ಒಟ್ಟು ₹ 22,960 ಸಂಗ್ರಹವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹತ್ತು ದಿನಗಳ ಹಿಂದೆಯಷ್ಟೇ ಹುಂಡಿಯಲ್ಲಿದ್ದ ನೋಟುಗಳನ್ನು ಎಣಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ₹ 33.90 ಲಕ್ಷ ನಗದು ಸಂಗ್ರಹವಾಗಿತ್ತು. ಅದರ ಮುಂದುವರಿದ ಭಾಗವಾಗಿ ಶನಿವಾರ ನಾಣ್ಯಗಳನ್ನು ಎಣಿಕೆ ಮಾಡಲಾಗಿದೆ.

Chandragutti-Temple-Soraba.

ಭದ್ರತೆಯ ದೃಷ್ಟಿಯಿಂದ ಎಣಿಕೆ ಕಾರ್ಯ ನಡೆದ ಕೊಠಡಿಯ ಸುತ್ತಲೂ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ಮುಜರಾಯಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.