SHIVAMOGGA LIVE | 3 JULY 2023
SORABA : ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti) ಗುರುಪೂರ್ಣಿಮೆ ಹುಣ್ಣಿಮೆಯ ಪ್ರಯುಕ್ತ ಸಾವಿರಾರು ಭಕ್ತರು ಸೋಮವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಳೆಯನ್ನು ಲೆಕ್ಕಿಸದೇ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯ ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.
![]() |
ಇದನ್ನೂ ಓದಿ – ಶಾಸಕಿ ಶಾರದಾ ಪೂರ್ಯಾನಾಯ್ಕ್ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್
ಪರಿವಾರ ದೇವರುಗಳಿಗು ವಿಶೇಷ ಪೂಜೆ
ಪರಿವಾರ ದೇವರುಗಳಾದ (Chandragutti) ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ – ಮುಂಗಾರು ಚುರುಕು, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?
ದೇವರ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದ ರಥ ಬೀದಿಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು.
ಶಕ್ತಿ ಯೋಜನೆ, ಮಹಿಳೆಯರ ಸಂಖ್ಯೆ ಹೆಚ್ಚು
ರಾಜ್ಯ ಸರ್ಕಾರ ರಾಜ್ಯದಾದ್ಯಂತ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚಂದ್ರಗುತ್ತಿಯಲ್ಲಿ ನಾರಿ ಶಕ್ತಿ ಪ್ರದರ್ಶನವಾಯಿತು.
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ದರ್ಶನಕ್ಕೆ ಬಯಲು ಸೀಮೆ ಮತ್ತು ಉತ್ತರ ಕರ್ನಾಟಕ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿರುವುದು ವಿಶೇಷವಾಗಿದೆ. ಅಲ್ಲದೆ ಹುಣ್ಣಿಮೆಯ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200