ಚಂದ್ರಗುತ್ತಿ ದೇವಸ್ಥಾನಕ್ಕೆ ಸಾವಿರ ಸಾವಿರ ಭಕ್ತರು, ವಿಶೇಷ ಪೂಜೆ, ಹೇಗಿತ್ತು ಪೂಜೆ ವೈಭವ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 3 JULY 2023

SORABA : ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti) ಗುರುಪೂರ್ಣಿಮೆ ಹುಣ್ಣಿಮೆಯ  ಪ್ರಯುಕ್ತ ಸಾವಿರಾರು ಭಕ್ತರು ಸೋಮವಾರ  ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Chandragutti-Temple-Soraba.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ,  ಸೇರಿದಂತೆ ವಿವಿಧ ಭಾಗಗಳಿಂದ  ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಳೆಯನ್ನು ಲೆಕ್ಕಿಸದೇ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ  ರೇಣುಕಾದೇವಿಯ ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ – ಶಾಸಕಿ ಶಾರದಾ ಪೂರ್ಯಾನಾಯ್ಕ್‌ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್‌

ಪರಿವಾರ ದೇವರುಗಳಿಗು ವಿಶೇಷ ಪೂಜೆ

ಪರಿವಾರ ದೇವರುಗಳಾದ (Chandragutti) ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ  ಹಾಗೂ ತೊಟ್ಟಿಲು ಬಾವಿಗೆ  ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ – ಮುಂಗಾರು ಚುರುಕು, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?

ದೇವರ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು  ಆಚರಿಸಿದರು‌. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದ ರಥ ಬೀದಿಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು.

SMG-LIVE-JUNE-VIEWS

ಶಕ್ತಿ ಯೋಜನೆ, ಮಹಿಳೆಯರ ಸಂಖ್ಯೆ ಹೆಚ್ಚು

ರಾಜ್ಯ ಸರ್ಕಾರ ರಾಜ್ಯದಾದ್ಯಂತ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚಂದ್ರಗುತ್ತಿಯಲ್ಲಿ ನಾರಿ ಶಕ್ತಿ ಪ್ರದರ್ಶನವಾಯಿತು.

Chandragutti Temple

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ದರ್ಶನಕ್ಕೆ ಬಯಲು ಸೀಮೆ ಮತ್ತು ಉತ್ತರ ಕರ್ನಾಟಕ ಭಾಗಗಳಿಂದ  ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿರುವುದು ವಿಶೇಷವಾಗಿದೆ. ಅಲ್ಲದೆ ಹುಣ್ಣಿಮೆಯ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಸರ್ಕಾರಿ ಬಸ್  ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು‌.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment