ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 ಏಪ್ರಿಲ್ 2022
ಹೃದಯಾಘಾತ ಸಂಭವಿಸಿ ಕರ್ತವ್ಯ ನಿರತ ಉಪ ತಹಶೀಲ್ದಾರ್ ಒಬ್ಬರು ಅಸುನೀಗಿದ್ದಾರೆ. ಸೊರಬ ತಾಲೂಕು ಆನವಟ್ಟಿ ನಾಡಕಚೇರಿಯಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ.
ಉಪ ತಹಶೀಲ್ದಾರ್ ಚನ್ನಕೇಶವ (45) ಮೃತರು. ಇವತ್ತು ಮಧ್ಯಾಹ್ನ ಕರ್ತವ್ಯದಲ್ಲಿ ಇರುವಾಗ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಚನ್ನಕೇಶವ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಚನ್ನಕೇಶವ ಅವರು ಸಾಗರದ ಶ್ರೀಧರ ನಗರ ನಿವಾಸಿಯಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಇದ್ದಾರೆ. 1998ರಲ್ಲಿ ಗ್ರಾಮ ಲೆಕ್ಕಿಗರಾಗಿ ಕಂದಾಯ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು, ವಿವಿಧ ಹಂತದ ಪದೋನ್ನತಿ ಹೊಂದಿ ಉಪ ತಹಶೀಲ್ದಾರ್ ಆಗಿದ್ದರು. ಸೊರಬ ಪಟ್ಟಣದ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರರಾಗಿ ಸಹ ಕರ್ತವ್ಯ ಸಲ್ಲಿಸಿದ್ದರು.
ಸಂತಾಪ ಸೂಚಿಸಿದ ಶಾಸಕರು
ಉಪತಹಶೀಲ್ದಾರ್ ಚನ್ನಕೇಶವ ಅವರ ನಿಧನಕ್ಕೆ ಶಾಸಕ ಎಸ್. ಕುಮಾರ್ ಬಂಗಾರಪ್ಪ, ಸರ್ಕಾರಿ ನೌಕರರ ಸಂಘ, ಕಂದಾಯ ಇಲಾಖೆಯ ನೌಕರರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ |
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















