ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 APRIL 2023
SORABA : ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗದವರಿಗೆ ಮನೆಯಿಂದಲೆ ಮತದಾನ (Vote from Home) ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಈ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಸೊರಬದ ಚಿಕ್ಕಪೇಟೆ ನಿವಾಸಿ ಕೃಷ್ಣಭಟ್ ಗೋಖಲೆ ಮೊದಲ ಮತ ಚಲಾಯಿಸಿದರು.
ಈ ಕುರಿತು ಚುನಾವಣಾಧಿಕಾರಿ ಪ್ರವೀಣ್ ಜೈನ್ ಮಾಹಿತಿ ನೀಡಿ, ಕ್ಷೇತ್ರದ 10 ಮಾರ್ಗಗಳನ್ನು ಗುರುತಿಸಲಾಗಿದೆ. 162 ಮಂದಿ 80 ವರ್ಷ ಮೇಲ್ಪಟ್ಟವರು ಮತ್ತು 82 ಮಂದಿ ಅಂಗವಿಕಲರು ಸೇರಿದಂತೆ ಒಟ್ಟು 244 ಮಂದಿ ಮತದಾನ ಮಾಡಲಿದ್ದಾರೆ. ಮನೆಯಲ್ಲಿಯೇ ಮತಗಟ್ಟೆ (Vote from Home) ಸ್ಥಾಪಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಒಂದನೇ ಮತಗಟ್ಟೆ ಅಧಿಕಾರಿ, ಎರಡನೇ ಮತಗಟ್ಟೆ ಅಧಿಕಾರಿ, ಒಬ್ಬರು ಮೈಕ್ರೋ ಅಬ್ಸರ್ವರ್, ಒಬ್ಬರು ಕ್ಯಾಮರಾಮನ್ ಹಾಗೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಸ್ಥಳೀಯವಾಗಿ ಬಿಎಲ್ಒ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ – ಹೊಂಬುಜ ಮಠದಲ್ಲಿ ವಾರ್ಷಿಕ ಪೂಜಾ ಮಹೋತ್ಸವ, 108 ಕಳಾಶಾಭಿಷೇಕ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422