ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಕಳೆದ ಎರಡು ದಿನಗಳ ಹಿಂದೆ ಸೊರಬ ತಾಲೂಕಿನ ಉಳವಿ ಹೋಬಳಿ (Uluvi Hobli) ಸುತ್ತಮುತ್ತಲಿನ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು (Wild Elephants) ಲಗ್ಗೆ ಇಟ್ಟಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ.

ಎಲ್ಲೆಲ್ಲಿ ಕಾಡಾನೆ ಲಗ್ಗೆ?

ಕಾನಹಳ್ಳಿ, ಕಣ್ಣೂರು ಮತ್ತು ಮೈಸಾವಿ ಗ್ರಾಮಗಳ ಸುತ್ತಮುತ್ತ ಬೆಳೆ ಕಟಾವು ಮಾಡಿದ ರೈತರ ಜಮೀನಿನಲ್ಲಿ (farmland) ಆನೆಗಳು ಸಂಚರಿಸಿರುವ ಬಗ್ಗೆ ಹೆಜ್ಜೆ ಗುರುತು ಹಾಗೂ ಲದ್ದಿ ಕಾಣಿಸಿದೆ. ಅಲ್ಲದೇ ಕೆಲವು ತೋಟದಲ್ಲಿ ಬಾಳೆಗಿಡಗಳನ್ನು ಕಿತ್ತು ತಿಂದು ಹಾನಿ ಮಾಡಿವೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

ವಿಷಯ ತಿಳಿದ ಸೊರಬ ಮತ್ತು ಸಾಗರ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಆನೆ ನಿಯಂತ್ರಣಕ್ಕೆ ತಜ್ಞರ ತಂಡದೊಂದಿಗೆ ಕಾನಹಳ್ಳಿ ಗ್ರಾಮಕ್ಕೆ ಬಂದು ಆನೆಗಳ ಓಡಾಟದ ಬಗ್ಗೆ ನಿಗಾ ವಹಿಸಿದ್ದಾರೆ.

wild-elephants-at-Soraba-ulavi-hobli

ಎರಡು ಕಾಡಾನೆಗಳ ಸಂಚಾರದ ಅನುಮಾನ

ಉಳವಿ ಹೋಬಳಿಯ ಕೆಲ ಗ್ರಾಮಗಳಲ್ಲಿ ಎರಡು ಆನೆಗಳು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇದ್ದು, ಈ ಕುರಿತು ಸಾಗರ ವಲಯ ಹಾಗೂ ತಾಲ್ಲೂಕಿನ ಅರಣ್ಯ‌ ಇಲಾಖೆ ನಿಗಾ ವಹಿಸಿದೆ.‌ ಪತ್ರೆಸಾಲು, ಕರ್ಜಿಕೊಪ್ಪ, ಕಣ್ಣೂರು, ಕಾನಹಳ್ಳಿ, ಕೈಸೋಡಿ, ಮೈಸಾವಿ ಭಾಗದಲ್ಲಿ ಸಂಚರಿಸಿದ ಎರಡು ಆನೆಗಳ ಕುರುಹುಗಳು ಪತ್ತೆಯಾಗಿದ್ದು, ಕಣ್ಣೂರು ಗುಡ್ಡದ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಶಂಕೆ ಇದೆ.‌ ಹಾಗಾಗಿ ರೈತರು ಹೊಲ ಗದ್ದೆಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಸೊರಬ ವಲಯ ಅರಣ್ಯಾಧಿಕಾರಿ ಶ್ರೀಪಾದ್ ನಾಯ್ಕ್ ತಿಳಿಸಿದ್ದಾರೆ.

Wild elephants at Soraba Ulavi

ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ಸೊರಬ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಸೊರಬ ವಲಯದ ವಲಯ ಅರಣ್ಯಾಧಿಕಾರಿ ಶ್ರೀಪಾದನಾಯ್ಕ, ಉಪವಲಯ ಅರಣ್ಯಾಧಿಕಾರಿ ಯೋಗರಾಜ ಕೆ. ಈ., ಏನ್ ರಾಮಪ್ಪ, ಪರಶುರಾಮ ಜಿ, ಶ್ರೀಶೈಲ ಕೇಂದಿ, ಮೋಹನ್ ಈಶ್ವರ ನಾಯ್ಕ ಹಾಗೂ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್, ಸುಮಿತಾ. ಶಿಲ್ಪಾ , ಮೌನೇಶ್, ಕಿರಣ್  ಬೋರ್ಕರ್ , ಅರಣ್ಯ ವೀಕ್ಷಕರು, ಹಾಗೂ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ತೊಡಗಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 4, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment