ಶಿವಮೊಗ್ಗ ಲೈವ್.ಕಾಂ | SORABA | 11 ಡಿಸೆಂಬರ್ 2019
ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವ ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಹರಸಾಹಸ ಪಡುತ್ತಿದ್ದಾರೆ. ಆನೆ ಹಿಂಡಿನಿಂದಾಗಿ ಜನರು ಆತಂಕಕ್ಕೀಡಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೊರಬ ತಾಲೂಕು ತಲಗಡ್ಡೆ ಕಿರು ಅರಣ್ಯದಲ್ಲಿ ನಾಲ್ಕು ಕಾಡಾನೆಗಳು ಬೀಡು ಬಿಟ್ಟಿವೆ. ಅರಣ್ಯದ ಅಕ್ಕಪಕ್ಕದ ಬಂಕಸಾಣ, ಕಚವಿ, ತಲಗಡ್ಡೆ ಗ್ರಾಮಗಳ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಇDU ರೈತರಿಗೆ ಸಂಕಷ್ಟ ತಂದೊಡ್ಡಿದೆ.
ಆನೆಗಳು ಪ್ರತ್ಯಕ್ಷವಾದ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪಟಾಕಿ ಸಿಡಿಸಿ ಆನೆಗಳನ್ನು ಓಡಿಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಸುತ್ತಮುತ್ತ ಗ್ರಾಮಸ್ಥರು ಪಾಲ್ಗೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Four Wild elephants found in Soraba taluk. Locals and Forest officers rushed the elephants to Forest.