ಸೊರಬ:ಬೈಕ್ಗೆ (bike accident) ಕಾಡುಪ್ರಾಣಿಯೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿ ಬಿದ್ದಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಲ್ಲೂರು ಗ್ರಾಮದ ನಿವಾಸಿ ಮಲ್ಲೇಶಪ್ಪ (55) ಮೃತಪಟ್ಟವರು. ಕವಡಿ ಗ್ರಾಮದ ಸಮೀಪದ ಮಾವಿನ ಕೊಪ್ಪಲಿನಲ್ಲಿ ಈ ಅಪಘಾತ ಸಂಭವಿಸಿದೆ.
ಮಾರ್ಚ್ 29ರಂದು ರಾತ್ರಿ ಮಲ್ಲೇಶಪ್ಪ ಅವರು ಅಳಿಯ ವೀರೆಶ್ ಅವರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ದಿಢೀರನೆ ಕಾಡುಪ್ರಾಣಿ ಅಡ್ಡಬಂದಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ. ಅಪಘಾತದಲ್ಲಿ ಮಲ್ಲೇಶಪ್ಪ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಅಳಿಯ ವೀರೆಶ್ ಅವರಿಗೂ ಗಾಯಗಳಾಗಿದ್ದವು.
ಗಾಯಾಳುಗಳನ್ನು ಕೂಡಲೇ ಶಿರಾಳಕೊಪ್ಪ ಮತ್ತು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲ್ಲೇಶಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ