ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 27 NOVEMBER 2024
ಸೊರಬ : ಹೋರಿ ಬೆದರಿಸುವ ಸ್ಪರ್ಧೆ ವೇಳೆ ಚರಂಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ (Youth) ಸಾವನ್ನಪ್ಪಿದ್ದಾನೆ. ಆಯನೂರಿನ ಸುಹೇಲ್ (19) ಮೃತ ಯುವಕ.
ಸೊರಬ ತಾಲೂಕು ಯಲವಳ್ಳಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಸುಹೇಲ್ ತೆರಳಿದ್ದ. ವೇಗವಾಗಿ ಬಂದ ಹೋರಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಚರಂಡಿಗೆ ಬಿದ್ದಿದ್ದ ಎನ್ನಲಾಗಿದೆ. ಇದರಿಂದ ಸುಹೇಲ್‌ಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸುಹೇಲ್ ಆಯನೂರಿನ ಮೀನು ವ್ಯಾಪಾರಿ ಸಿಕ್ಬತ್ ಉಲ್ಲಾ ಮತ್ತು ಪರ್ವೀನ್ ದಂಪತಿಯ ಪುತ್ರ.
ಇದನ್ನೂ ಓದಿ » ಶಿಕಾರಿಪುರದಲ್ಲಿ ಬಿಜೆಪಿ, ಶಿರಾಳಕೊಪ್ಪದಲ್ಲಿ ಕಾಂಗ್ರೆಸ್‌ಗೆ ಗೆಲುವು, ಉಪ ಚುನಾವಣೆಯಲ್ಲಿ ಎಲ್ಲೆಲ್ಲಿ ಯಾರು ಗೆದ್ದಿದ್ದಾರೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422