ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021
ಕರೋನ ಆತಂಕ ನಿವಾರಣೆ ಆಗುತ್ತಿರುವ ಬೆನ್ನಿಗೆ ತಾಲೂಕಿನಲ್ಲಿ ಡೆಂಘೆ ಭೀತಿ ಎದುರಾಗಿದೆ. ತೀರ್ಥಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಘೆ ಪ್ರಕರಣಗಳು ವರದಿಯಾಗಿದೆ.
ಎಲ್ಲೆಲ್ಲೆ ಡೆಂಘೆ ವರದಿಯಾಗಿದೆ?
ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ 2 ಪ್ರಕರಣ ವರದಿಯಾಗಿದೆ. ಕಟಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಬೆಟ್ಟ ಬಸವಾನಿ, ಮಾಳೂರು, ಗೊಡ್ಡೆಕೊಪ್ಪ, ಮಂಡಗದ್ದೆ, ನಾಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ಟಿಹೆಚ್‍ಓ ಭೇಟಿ, ಜಾಗೃತಿ
ಡೆಂಘೆ ಕಾಣಿಸಿಕೊಂಡ ಕುರುವಳ್ಳಿ ಸೇತುವೆ ಸಮೀಪದ ಮನೆಗಳಿಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಅನಿಕೇತನ್ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಸೋಂಕಿತರು ಮನೆಗಳಲಿಯೆ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಸೋಂಕಿನ ಕುರಿತು, ಸೊಳ್ಳೆಗಳ ನಿಯಂತ್ರಣ, ಮನೆಗಳ ಸಮೀಪ ಕೊಳಚೆ ನೀರು ನಿಲ್ಲದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಹೊರ ಜಿಲ್ಲೆ ಅಥವಾ ರಾಜ್ಯದಿಂದ ಬಂದವರಿಂದ ಡೆಂಘೆ ಹರಡಿರುವ ಶಂಕೆ ಇದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















