28 ವರ್ಷದ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹1.30 ಲಕ್ಷ ದಂಡ, ಕಾರಣವೇನು?

ಶಿವಮೊಗ್ಗ: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ ನ್ಯಾಯಾಲಯವು, ಆರೋಪಿಗೆ (Thirthahalli youth) 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹1,30,000 ದಂಡ ವಿಧಿಸಿದೆ.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನ 28 ವರ್ಷದ ಯುವಕ, 17 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಘಟನೆ ಕುರಿತು ಬಾಲಕಿಯ ತಾಯಿ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಯುವಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga-Court-Balaraja-Urs-Road

Shivamogga-Court-Balaraja-Urs-Road

ಆರೋಪ ಸಾಬೀತು, ಶಿಕ್ಷೆ ಪ್ರಕಟ

ತೀರ್ಥಹಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿದ್ದ ಅಶ್ವಥ್ ಗೌಡ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ವಿಚಾರಣೆ ನಡೆಸಿ, ಶಿಕ್ಷೆ ಪ್ರಕಟಿಸಿದ್ದಾರೆ. ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹1,30,000 ದಂಡ ವಿಧಿಸಿದ್ದಾರೆ.

ಇನ್ನು, ನೊಂದ ಬಾಲಕಿಗೆ ಸರ್ಕಾರದ ವತಿಯಿಂದ ₹4,00,000 ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಫೆಬ್ರವರಿ 19ರಿಂದ ಗುರು ಸಾರ್ವಭೌಮ ಸಪ್ತಾಹ, ರಥೋತ್ಸವ

Leave a Comment