27 ವರ್ಷದ ವ್ಯಕ್ತಿಗೆ 10 ವರ್ಷ ಜೈಲು, ₹1.12 ಲಕ್ಷ ದಂಡ, ಕಾರಣವೇನು?

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ, ₹1,12,000 ದಂಡ ವಿಧಿಸಿ ಆದೇಶಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

2020ರಲ್ಲಿ 27 ವರ್ಷದ ವ್ಯಕ್ತಿಯೊಬ್ಬ 22 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

Shivamogga-Court-Building

ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶ ನಿಂಗನಗೌಡ.ಭ.ಪಾಟೀಲ್ ಆರೋಪಿಗೆ 10 ವರ್ಷ ಕಾರಾಗೃಹವಾಸ ಹಾಗೂ ₹1,12,000 ರೂ. ದಂಡ ವಿಧಿಸಿದ್ದು, ನೊಂದ ಮಹಿಳೆಗೆ ₹2,00,000 ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.