ತೀರ್ಥಹಳ್ಳಿ: ಕೋಣಂದೂರಿನ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿದ್ದ ಸುಮಾರು 25 ವಿದ್ಯಾರ್ಥಿಗಳಲ್ಲಿ ಶುಕ್ರವಾರ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಅವರಲ್ಲಿ 9 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಬಾಲಕರನ್ನು ಹೊರತುಪಡಿಸಿ ಉಳಿದವರನ್ನು ಶನಿವಾರ ಡಿಸ್ಚಾರ್ಜ್ ಮಾಡಲಾಗಿದೆ.
6ನೇ ತರಗತಿಯಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ಆರೋಗ್ಯ ಹದಗೆಟ್ಟಿದ್ದು, ಶುಕ್ರವಾರ ಪ್ರಾಥಮಿಕ ಚಿಕಿತ್ಸೆ ಬಳಿಕ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಲ್ಲಿಂದ 9 ವಿದ್ಯಾರ್ಥಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಆರೋಗ್ಯವೂ ಸ್ಥಿರವಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್ ಶನಿವಾರ ಕೋಣಂದೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ, ಅಸ್ವಸ್ಥತೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಶೇಷವೆಂದರೆ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರು ಇದ್ದರೂ ಬಾಲಕರು ಮಾತ್ರ ಅಸ್ವಸ್ಥಗೊಂಡಿದ್ದಾರೆ.
