ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 NOVEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತೀರ್ಥಹಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀರ್ಥಹಳ್ಳಿ ತಾಲೂಕಿನಲ್ಲಿ 618 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೆ ವೇಳೆ ಮಾತನಾಡಿದ ಸಿಎಂ, ಅಭಿವೃದ್ಧಿಗೆ ಜನ ಮನ್ನಣೆ ನೀಡುತ್ತಾರೆ ಅನ್ನುವುದಕ್ಕೆ ಇಲ್ಲಿ ಸೇರಿರುವ ಜನಸ್ತೋಮವೆ ಸಾಕ್ಷಿ ಎಂದರು. (618 crore project)
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗೃಹ ಸಚಿವರಾದ ಬಳಿಕವು ಆರಗ ಜ್ಞಾನೇಂದ್ರ ಅವರು ಕ್ಷೇತ್ರದ ಅಭಿವೃದ್ಧಿ ಕಾರ್ಯವನ್ನು ಮರೆತಿಲ್ಲ. ನೂರಾರು ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಾಗಿದೆ. ಕೆಲವೇ ದಿನದಲ್ಲಿ ತೀರ್ಥಹಳ್ಳಿಯ ಚಿತ್ರಣವೆ ಬದಲಾಗಲಿದೆ ಎಂದರು.
(618 crore project)
50 ಸಾವಿರ ಅಂತರದಲ್ಲಿ ಗೆಲ್ಲಲಿದ್ದಾರೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ‘ನಾನು ಹಲವು ಬಾರಿ ತೀರ್ಥಹಳ್ಳಿಗೆ ಬಂದಿದ್ದೇನೆ. ಇಷ್ಟೊಂದು ಜನ ಸೇರಿರುವುದು ಇದೆ ಮೊದಲು. ಇದನ್ನು ಗಮನಿಸಿದಾಗ ಚುನಾವಣೆಯಲ್ಲಿ ಆರಗ ಜ್ಞಾನೇಂದ್ರ ಅವರು ಕನಿಷ್ಠ 40 ರಿಂದ 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ಮೂಡುತ್ತದೆ. ನೀವು ಮನಸು ಮಾಡಿದರೆ ಯಾವ ಶಕ್ತಿಯು ಆರಗ ಜ್ಞಾನೇಂದ್ರ ಅವರನ್ನು ತಡೆಗಟ್ಟಲು ಸಾಧ್ಯವಿಲ್ಲ’ ಎಂದು ತಿಳಿಸಿದರು.
(618 crore project)
ಋಣ ತೀರಿಸುವ ಕೆಲಸ ಮಾಡಿದ್ದೇನೆ
ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಕ್ಷೇತ್ರದ ಜನರು ನಾಲ್ಕು ಬಾರಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಕಳೆದ ಬಾರಿ ದಾಖಲೆ ಮೊತ್ತದ ಅಂತರದಲ್ಲಿ ಗೆಲ್ಲಿಸಿದ್ದಾರೆ. ಕ್ಷೇತ್ರದ ಜನರ ಪ್ರೀತಿಯಿಂದ ಗೃಹ ಸಚಿವನಾಗಿದ್ದೇನೆ. ತೀರ್ಥಹಳ್ಳಿಯಲ್ಲಿ ಅಭಿವೃದ್ಧಿ ಕೊರತೆ ಕಾಣುತ್ತಿತ್ತು. ಅದನ್ನು ನೀಗಿಸುವ ಪ್ರಯತ್ನ ಮಾಡಿದ್ದೇನೆ. ರಾಜಕೀಯ ಶಕ್ತಿ ನೀಡಿದ ಕ್ಷೇತ್ರದ ಜನರ ಋಣ ತೀರಿಸುವ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕ್ರಮಕ್ಕೆ ತೀರ್ಥಹಳ್ಳಿ ಕ್ಷೇತ್ರದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಸಮಾರಂಭದಲ್ಲಿ ಸಚಿವರಾದ ಕೆ.ಸಿ.ನಾರಾಯಣಗೌಡ, ಬಿ.ಎ.ಬಸವರಾಜ, ಗೋವಿಂದ ಕಾರಜೋಳ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಇದ್ದರು.