ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 21 ಆಗಸ್ಟ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತೀರ್ಥಹಳ್ಳಿಯಲ್ಲಿ ಪಕ್ಷಾತೀತವಾಗಿ ಅಭಿಪ್ರಾಯ ರೂಪುಗೊಳ್ಳುತ್ತಿದೆ. ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಶಾಸಕ ಆರಗ ಜ್ಞಾನೇಂದ್ರ ಪರವಾಗಿ ಪೋಸ್ಟ್’ಗಳು ಪ್ರಕಟಗೊಳ್ಳುತ್ತಿದ್ದರೆ, ಮತ್ತೊಂದೆಡೆ ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯು ನಡೆದಿದೆ.
ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರಮುಖರು, ಆರಗ ಜ್ಞಾನೇಂದ್ರ ಅವರಿಗೆ ಉದ್ದೇಶಪುರ್ವಕವಾಗಿಯೇ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರಾಮಾಣಿಕತೆ ಮತ್ತು ದಕ್ಷತೆ ಹೊಂದಿರುವ ಶಾಸಕರನ್ನು ಬಿಜೆಪಿ ಮೂಲೆಗುಂಪು ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಾಮಾಜಿಕ ಜಾಲತಾಣದಲ್ಲೂ ಆಕ್ರೋಶ
ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪಕ್ಷಾತೀತವಾಗಿ ಅಭಿಪ್ರಾಯ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದಿದ್ದರು. ಇದೇ ಮಾದರಿಯಲ್ಲಿ ಈಗ ಶಿವಮೊಗ್ಗ ಜಿಲ್ಲೆಯಾದ್ಯಂತ ಹಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸುತ್ತಿದ್ದಾರೆ.
ನಾಲ್ಕು ಬಾರಿ ಎಂಎಲ್ಎ, ಆದರೂ ಆಗಲಿಲ್ಲಿ ಮಿನಿಸ್ಟರ್ ಪಟ್ಟ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಾಸಕ ಆರಗ ಜ್ಞಾನೇಂದ್ರ ಅವರು, 1983ರಲ್ಲಿ ಒಟ್ಟಿಗೆ ಚುನಾವಣಾ ರಾಜಕೀಯಕ್ಕೆ ಧುಮುಕಿದವರು. 1983, 1985 ಮತ್ತು 1989ರ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿ ಸತತ ಸೋಲನುಭವಿಸಿದರು.
1994, 1999 ಮತ್ತು 2004ರ ವಿಧಾನಸಭೆ ಚುನಾವಣೆಯಲ್ಲಿ ಆರಗ ಜ್ಞಾನೇಂದ್ರ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ಇದಾದ ಬಳಿಕ 2008 ಮತ್ತು 2013ರ ವಿಧಾನಸಭೆ ಚುನಾವಣೆಯಲ್ಲಿ ಸೋತು 2018 ಚುನಾವಣೆಯಲ್ಲಿ ನಾಲ್ಕನೇ ಬಾರಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಚಿವ ಸ್ಥಾನ ಸಿಗಲಿಲ್ಲ. ಆದರೆ ಎಂಪಿಎಂ ಕಾರ್ಖಾನೆಯ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸಲಾಯಿತು.
ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವ ಬದಲು ತೀರ್ಥಹಳ್ಳಿ ಕ್ಷೇತ್ರದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರ ನೋವು ಆಲಿಸುವ ಕೆಲಸ ಮಾಡಿದ್ದು ಮೆಚ್ಚುಗೆ ಗಳಿಸಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]