NEWS HIGHLIGHTS
ಕೋಣಂದೂರು: ಸಮೀಪದ ಮಲ್ಲಿಕಟ್ಟೆಯ ಕಾರ್ಗಲ್ ಗೋಪಾಲ್ ರಾವ್ ಅವರಿಗೆ ಸೇರಿದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಕೊಟ್ಟಿಗೆಯು ಬಹುತೇಕ ಸುಟ್ಟು ಕರಕಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು, ಕೊಟ್ಟಿಗೆಯೊಳಗೆ ಕಟ್ಟಲಾಗಿದ್ದ ಜಾನುವಾರುಗಳನ್ನು ಸುರಕ್ಷಿತವಾಗಿ ಹೊರಗೆ ತಂದು ರಕ್ಷಿಸಿದ್ದಾರೆ. ಬೆಂಕಿ ಅವಘಡದ ತೀವ್ರತೆಗೆ ಕೊಟ್ಟಿಗೆಯಲ್ಲಿದ್ದ ಮೇವು, ಹೆಂಚು ಹಾಗೂ ಪಕಾಸಿಗಳು ಸಂಪೂರ್ಣ ಸುಟ್ಟು ಹೋಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
