ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 20 ಜನವರಿ 2022
ನಟ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಚಿತ್ರೀಕರಣ ತೀರ್ಥಹಳ್ಳಿಯಲ್ಲಿ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ನಟ ಜಗ್ಗೇಶ್ ಅವರು ಕುಪ್ಪಳಿಯ ಕವಿಮನೆಗೆ ಭೇಟಿ ನೀಡಿದ್ದರು. ಮನೆ ಮುಂದೆ ಫೋಟೊ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕಳೆದ ಕಲವು ದಿನದಿಂದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ನಟ ಜಗ್ಗೇಶ್ ಅವರು ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.
ಕವಿಮನೆಗೆ ಭೇಟಿ ನೀಡಿದ ಜಗ್ಗೇಶ್
ನಟ ಜಗ್ಗೇಶ್ ಅವರು ಕುಪ್ಪಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಕುಪ್ಪಳಿಯ ಪರಿಸರ, ಕವಿಮನೆ ಕುರಿತು ಮಾಹಿತಿ ಪಡೆದುಕೊಂಡರು. ಕವಿಮನೆಯಲ್ಲಿ ಕುವೆಂಪು ಅವರಿಗೆ ಸೇರಿದ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಅವುಗಳನ್ನು ಕಣ್ತುಂಬಿಕೊಂಡು ಖುಷಿ ಪಟ್ಟರು.
ಫೋಟೊ ಕ್ಲಿಕ್ಕಿಸಿಕೊಂಡು ಖುಷಿ
ಇನ್ನು, ಕುವೆಂಪು ಅವರ ಕವಿಮನೆ ಮುಂದೆ ನಟ ಜಗ್ಗೇಶ್ ಅವರು ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ ಕುಪ್ಪಳಿ, ಕವಿಮನೆ, ಅಲ್ಲಿಯ ಪರಿಸರದ ಕುರಿತು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದು ಪ್ರಕಟಿಸಿದ್ದಾರೆ.
ನಟ ಜಗ್ಗೇಶ್ ಅವರ ಫೇಸ್ ಬುಕ್ ಪೋಸ್ಟ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422