ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಆಗುಂಬೆ ಘಾಟಿಯಲ್ಲಿ (Agumbe Ghat) ಭಾರಿ ವಾಹನ ಸಂಚಾರ ನಿಷೇಧವನ್ನು ಹಿಂಪಡೆಯಲಾಗಿದೆ. ಈ ಭಾರಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕು ಕಂಡು ಬಂದಿತ್ತು. ಅಲ್ಲಲ್ಲಿ ರಸ್ತೆ ಕುಸಿತವಾಗಿತ್ತು. ಈ ಹಿನ್ನೆಲೆ ಸೆ.15ರವರೆಗೆ ಭಾರೀ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದರು.
ಇದನ್ನೂ ಓದಿ – ಆಗುಂಬೆ ಘಾಟಿಯಲ್ಲಿ ಕಂದಕಕ್ಕೆ ಬಿದ್ದ ವ್ಯಕ್ತಿ, ಪ್ರಾಣದ ಹಂಗು ತೊರೆದು ರಕ್ಷಿಸಿದ ಯುವಕರು
ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣಿಸಲಾಗಿದೆ. ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.