ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 JUNE 2021
ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಘಾಟಿಯಲ್ಲಿ ರಸ್ತೆ ಕಿರಿದಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿದೆ. ಭಾರಿ ಸರಕು ಸಾಗಣೆ ವಾಹನಗಳು ಓಡಾಡುವುದರಿಂದ ರಸ್ತೆ ಬದಿ ಮಣ್ಣು ಕುಸಿತ ಉಂಟಾಗಿ, ಅಪಘಾತಗಳು ಸಂಭವಿಸಬಹುದು. ಆದ್ದರಿಂದ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪರ್ಯಾಯ ಮಾರ್ಗ
ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ಶಿವಮೊಗ್ಗ-ತೀರ್ಥಹಳ್ಳಿ-ಉಂಟೂರುಕಟ್ಟೆ ಕೈಮರ – ಮಾಸ್ತಿಕಟ್ಟೆ – ಹುಲಿಕಲ್ – ಕುಂದಾಪುರಕ್ಕೆ ತಲುಪಬಹುದಾಗಿದೆ.
ಶಿವಮೊಗ್ಗ – ತೀರ್ಥಹಳ್ಳಿ – ಕಮ್ಮರಡಿ – ಶೃಂಗೇರಿ – ಕೆರೆಕಟ್ಟೆ – ಕಾರ್ಕಳ ತಲುಪಬಹುದಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






