ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 ಮಾರ್ಚ್ 2022
ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಲಘು ವಾಹನಗಳು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ.
ಯಾವುದು ಪರ್ಯಾಯ ಮಾರ್ಗ?
ಪ್ರಸ್ತುತ ಮಾರ್ಗ : ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಉಡುಪಿ, ಮಂಗಳೂರು
ಪರ್ಯಾಯ ಮಾರ್ಗ
ಲಘು ವಾಹನಗಳಿಗೆ – ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟ್, ಕಾರ್ಕಳ, ಉಡುಪಿ
ಭಾರಿ ವಾಹನಗಳು – ಶಿವಮೊಗ್ಗ, ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಚಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






