| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಮಳೆ ಕಡಿಮೆ ಇರುವ ದಿನಗಳಲ್ಲಿ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಅಕ್ಟೋಬರ್ 10ರವರೆಗೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಶಿವಮೊಗ್ಗ – ತೀರ್ಥಹಳ್ಳಿ – ಉಡುಪಿ ಮಾರ್ಗದಲ್ಲಿ ಆಗುಂಬೆ ಘಾಟಿ ಹೊರತು ಪರ್ಯಾಯ ಮಾರ್ಗ ಸೂಚಿಸಲಾಗಿತ್ತು.
ಆದೇಶ ಬದಲಾಗಿದ್ದು ಏಕೆ?
ಮಳೆ ಜೋರಿರುವಾಗ ಭಾರಿ ವಾಹನಗಳ ಸಂಚಾರದಿಂದ ರಸ್ತೆ ಕುಸಿಯುವ ಆತಂಕವಿತ್ತು. ಆದರೆ ಮಳೆ ಕ್ಷೀಣಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಹುದು ಎಂದು ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಹಿಂದಿನ ಆದೇಶದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಜೋರು ಮಳೆಯಾದರೆ ಪರ್ಯಾಯ ಮಾರ್ಗ
ಒಂದು ವೇಳೆ ಆಗುಂಬೆಯಲ್ಲಿ ಭಾರಿ ಮಳೆಯಾದರೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಸಂದರ್ಭ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಸೂಚಿಸಲಾಗಿದೆ.

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುವವರು ತೀರ್ಥಹಳ್ಳಿಯಿಂದ ಉಂಟೂರುಕಟ್ಟೆ ಕೈಮರ, ಮಾಸ್ತಿಕಟ್ಟೆ, ಹುಲಿಕಲ್ ಮೂಲಕ ಕುಂದಾಪುರಕ್ಕೆ ತಲುಪಬಹುದಾಗಿದೆ. ಇನ್ನು, ಶಿವಮೊಗ್ಗದಿಂದ ಕಾರ್ಕಳಕ್ಕೆ ತೆರಳುವವರು ತೀರ್ಥಹಳ್ಳಿಯಿಂದ ಕಮ್ಮರಡಿ, ಶೃಂಗೇರಿ, ಕೆರೆಕಟ್ಟೆ ಮೂಲಕ ಕಾರ್ಕಳ ತಲುಪಬಹುದಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಹದಿನೈದು ದಿನದಿಂದ ಮಳೆ ಕಡಿಮೆಯಾಗಿದೆ. ಹಾಗಿದ್ದೂ ಭಾರಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುತ್ತಿದ್ದವು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()