ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 17 ಮಾರ್ಚ್ 2022
ಮರು ಡಾಂಬರೀಕರಣದ ಬಳಿಕ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭವಾಗಿದೆ. ಬುಧವಾರದಿಂದ ಘಾಟಿಯಲ್ಲಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ.
ಮರು ಡಾಂಬರೀಕರಣ ಹಿನ್ನೆಲೆ ಮಾರ್ಚ್ 5 ರಿಂದ ಮಾರ್ಚ್ 15ರವರೆಗೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.
18 ಕಿ.ಮೀ ರಸ್ತೆಗೆ 5.34 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶೃಂಗೇರಿ ಉಪ ವಿಭಾಗದ ತಾಂತ್ರಿಕ ವಿಭಾಗದ ಮುಖ್ಯ ನಿರ್ವಹಣೆ ಅಡಿ ತೀರ್ಥಹಳ್ಳಿಯ ನ್ಯಾಷನಲ್ ನಿರ್ಮಾಣ ಸಂಸ್ಥೆ ಕಾಮಗಾರಿ ನಡೆಸಿದೆ.
ಆಗುಂಬೆಯಿಂದ ಹೆಬ್ರಿವರೆಗಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಆಡಚಣೆ ಉಂಟಾಗಿತ್ತು. ಮರು ಡಾಂಬರೀಕರಣದಿಂದಾಗಿ ವಾಹನ ಸಂಚಾರ ಸುಗಮವಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200






