ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 JANUARY 2021
ಇತಿಹಾಸ ಪ್ರಸಿದ್ಧ ಜೈನ ಆರಾಧನಾ ಕ್ಷೇತ್ರ ಕುಂದಾದ್ರಿ ಬೆಟ್ಟದಲ್ಲಿ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಶ್ರಮದಾನ ಮಾಡಿ, ಸ್ವಚ್ಛತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ವಸ್ತುಗಳು, ಬಾಟಲಿಗಳನ್ನು ತೆರವು ಮಾಡಲಾಗಿದೆ.
ಯಾರೆಲ್ಲ ಶ್ರಮದಾನದಲ್ಲಿ ಇದ್ದರು?
ಅರಣ್ಯ ಇಲಾಖೆಯ ಮೇಗರವಳ್ಳಿ ವಲಯದ ಸಿಬ್ಬಂದಿಗಳು, ಆಗುಂಬೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಗುಡ್ಡೇಕೇರಿ ಗ್ರಾಮದ ಹಿಂಗಾರ ಪೌಂಡೇಶನ್, ವಿಕಾಸ ಮಂಚ್ ಮತ್ತು ಆಗುಂಬೆ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಹೊನ್ನೆತಾಳು ಹಿರಿಯ ಪ್ರಾಥಮಿಕ ಶಾಲೆ, ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
ಶ್ರಮದಾನಕ್ಕೆ ಕಾರಣವೇನು?
ಕುಂದಾದ್ರಿ ಬೆಟ್ಟವು ಕುಂದಾ ಮಹಾಮುನಿಯ ತಪೋಭೂಮಿ. ಜೈನರ ಪಾಲಿಗೆ ಇದು ಅತ್ಯಂತ ಪ್ರಮುಖ ಆರಾಧನಾ ಕೇಂದ್ರಗಳಲ್ಲಿ ಒಂದು. ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು. ಇಲ್ಲಿಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್ ವಸ್ತುಗಳನ್ನು ಸುರಿದು ಹೋಗುತ್ತಿದ್ದರು. ಇದರಿಂದ ಧಾರ್ಮಿಕ ಶ್ರದ್ಧಾ ಕೇಂದ್ರದ ವಾತಾವರಣವು ಹಾಳಾಗಿತ್ತು.
ಕುಂದಾದ್ರಿ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿ ಉಳಿಯಬೇಕು ಎಂಬ ಉದ್ದೇಶದಿಂದ ಸ್ಥಳೀಯರು ಸ್ವಚ್ಛತಾ ಕಾರ್ಯ ನಡೆಸಿದರು. ಸುಮಾರು 80 ಸ್ವಯಂ ಸೇವರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಇನ್ಮುಂದೆ ಇಲ್ಲಿಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ. ಒಂದು ವೇಳೆ ಹಾಗೆ ಮಾಡಿದರೆ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗೋದು ನಿಶ್ಚಿತ.
ಆಗುಂಬೆ ವಲಯ ಅರಣ್ಯಾಧಿಕಾರಿ ಉಮಾ ಮತ್ತು ಸಿಬ್ಬಂದಿಗಳು, ಆಗುಂಬೆ ವಲಯ ಮೇಲ್ವಿಚಾರಕ ರವೀಂದ್ರ, ಸೇವಾ ಪ್ರತಿನಿಧಿಗಳಾದ ಸುಮನಾ, ನೇತ್ರಾವತಿ ಶೈಲಜಾ, ಶಕುಂತಲಾ, ಒಕ್ಕೂಟಗಳ ಅಧ್ಯಕ್ಷರಾದ ದೇವದಾಸ್ ಗಾರ್ಡರ್ ಗದ್ದೆ, ದಿನೇಶ್ ಕೆಂದಾಳಬೈಲು, ಸತೀಶ್ ಗುಡ್ಡೇಕೇರಿ, ನಿತ್ಯಾನಂದ ಕೆಂದಾಳಬೈಲು, ಪಂಚಾಯತಿ ಸದಸ್ಯರುಗಳಾದ ಕುಂದಾ ರಾಘವೇಂದ್ರ, ಶಕೀಲಾ ಮಂಜುನಾಥ್ ಬಿಳಗಿರಿ ಮತ್ತಿತರರು ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200