ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020
ಆಗುಂಬೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಜೋರು ಮಳೆಯಾಗುತ್ತಿದ್ದರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜೋರು ಮಳೆ ಹಿನ್ನೆಲೆ ತೀರ್ಥಹಳ್ಳಿ – ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು. ಈಗ ನಿರ್ಬಂಧ ತೆರವು ಮಾಡಲಾಗಿದೆ.
12 ಟನ್‍ಗಿಂತಲು ಹೆಚ್ಚು ಭಾರದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಲಾಗಿತ್ತು. ಜೂ.15 ರಿಂದ ಅಕ್ಟೋಬರ್ 15ರವರೆಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಮಳೆ ಕಡಿಮೆಯಾದ ಹಿನ್ನೆಲೆ, ಜಲ್ಲಾಧಿಕಾರಿ ಅವರು ಹೊಸ ಅಧಿಸೂಚನೆ ಹೊರಡಿಸಿದ್ದಾರೆ.
ಮಳೆ ಬಂದರೆ ಪರ್ಯಾಯ ಮಾರ್ಗ
ಆಗುಂಬೆ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಭಾರಿ ವಾಹನ ಸಂಚಾರಕ್ಕೆ ಘಾಟಿಯಲ್ಲಿ ಅನುಮತಿ ನೀಡಲಾಗಿದೆ. ಒಂದು ವೇಳೆ ಆಗುಂಬೆ ಭಾಗದಲ್ಲಿ ಸತತ ಹಾಗು ಭಾರಿ ಮಳೆಯಾದರೆ 12 ಟನ್‍ಗಿಂತಲೂ ಹೆಚ್ಚು ಭಾರದ ವಾಹಗಳು ಆಗುಂಬೆ ಘಾಟಿಯಲ್ಲಿ ಸಂಚರಿಸಲು ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಎರಡು ಪರ್ಯಾರ್ಯ ಮಾರ್ಗ
ಪರ್ಯಾಯ ಮಾರ್ಗ 1 : ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಶೃಂಗೇರಿ – ಕೆರೆಕಟ್ಟೆ – ಕಾರ್ಕಳ ಉಡುಪಿ – ಮಂಗಳೂರು
ಪರ್ಯಾಯ ಮಾರ್ಗ 2 : ಶಿವಮೊಗ್ಗ – ತೀರ್ಥಹಳ್ಳಿ – ಮಾಸ್ತಿಕಟ್ಟೆ – ಹುಲಿಕಲ್ – ಹೊಸಂಗಡಿ – ಸಿದ್ದಾಪುರ – ಉಡುಪಿ
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]