ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 28 ಜೂನ್ 2020
ಶರಾವತಿಯ ಉಗಮ ಸ್ಥಾನ ಅಂಬುತೀರ್ಥವನ್ನು ತಲಕಾವೇರಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಇವತ್ತು ಚಾಲನೆ ಸಿಕ್ಕಿದೆ. ಮೂವರು ಸಚಿವರು ಇವತ್ತು ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಚಿವರಾದ ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ಅಂಬುತೀರ್ಥದಲ್ಲಿ ಸಚಿವರು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇಶದ ಗಮನ ಸೆಳೆಯಬೇಕು
ಭಾಗಮಂಡಲದಲ್ಲಿ ತಲಕಾವೇರಿ ಕ್ಷೇತ್ರವನ್ನು ಹೇಗೆ ಅಭಿವೃದ್ಧಿ ಮಾಡಲಾಗಿದೆಯೋ ಅದೇ ಮಾದರಿಯಲ್ಲಿ ಶರಾವತಿ ಉಗಮ ಸ್ಥಾನವನ್ನು ಅಭಿವೃದ್ಧಿ ಮಾಡಲಾಗುತ್ತದೆ. ಪ್ರಭು ಶ್ರೀರಾಮಚಂದ್ರ ಬಂದು ಹೋಗಿರುವ ಕ್ಷೇತ್ರವಿದು. ಈ ಕ್ಷೇತ್ರ ದೇಶದ ಗಮನ ಸೆಳೆಯಬೇಕು. ಇದರ ಅಭಿವೃದ್ಧಿ ಮಾಡುವ ಪುಣ್ಯದ ಕೆಲಸ ನಮ್ಮ ಸರ್ಕಾರಕ್ಕೆ ಸಿಕ್ಕಿದೆ. ದೇವಸ್ಥಾನವನ್ನು ಶಿಲಾಮಯವಾಗಿ ನಿರ್ಮಿಸಲಾಗುತ್ತದೆ. ಪುಷ್ಕರಣಿ ಮತ್ತು ಕೆರಯ ಅಭಿವೃದ್ಧಿ ಮಾಡಬೇಕಿದೆ. ಇನ್ನು, ಗುಡ್ಡಕ್ಕೆ ರಿವೀಟ್‍ಮೆಂಟ್ ಆಗಬೇಕಿದೆ. ಭಕ್ತರ ಅನುಕೂಲಕ್ಕೆ ಸಮುದಾಯ ಭವನ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಮ್ಮ ಇಲಾಖೆಯಿಂದ ಒಂದು ಕೋಟಿ
ದೇಶದ ವಿವಿಧೆಡೆಯ ಪ್ರವಾಸಿಗರು ಇಲ್ಲಿಗೆ ಬರಬೇಕು. ಹಾಗಾಗಿ ವಿವಿಧ ಇಲಾಖೆಗಳ ಅನುದಾನ ಬಳಕೆ ಮಾಡಿಕೊಂಡು ಕ್ಷೇತ್ರದ ಅಭಿವೃದ್ಧಿ ಮಾಡಲಾಗುತ್ತಿದೆ. ನಮ್ಮ ಮುಜರಾಯಿ ಇಲಾಖೆಯಿಂದ ಒಂದು ಕೋಟಿ ರೂ. ಕೊಡಬೇಕು ಎಂದು ಸಚಿವ ಈಶ್ವರಪ್ಪ ಅವರು ಮನವಿ ಮಾಡಿದ್ದಾರೆ. ಅದರಂತೆ ಅನುದಾನ ಒದಗಿಸಲಾಗುತ್ತದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮೊದಲ ಹಂತದಲ್ಲಿ ದೇಗುಲ ನಿರ್ಮಾಣ
ಮೊದಲ ಹಂತದಲ್ಲಿ 1.80 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಈಗ ಮಲೆನಾಡು ಭಾಗದ ಶೈಲಿಯಂತೆ ಅಂಬುತೀರ್ಥ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯ ನಡೆಯಲಿದೆ. ನಂತರ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದರು.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]